Saturday, October 18, 2025

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ನಿಂತಿದ್ದ ಲಾರಿಗೆ KSRTC ಬಸ್ ಡಿಕ್ಕಿ, ಮೂವರು ಮೃತ್ಯು, ಏಳು ಮಂದಿ ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ KSRTC ಬಸ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಯಲ್ಲಾಪುರದ ಮಾವಳ್ಳಿ ಕ್ರಾಸ್ ಬಳಿ ಶುಕ್ರವಾರ ಮಧ್ಯರಾತ್ರಿ ನಡೆದಿದೆ. ಅಪಘಾತದಲ್ಲಿ 7 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ನಿಲವ್ವ ಹರದೊಳ್ಳಿ (40), ಜಾಲಿಹಾಳ ಗ್ರಾಮದ ಗಿರಿಜವ್ವಾ ಬೂದನ್ನವರ (30) ಎಂದು ಗುರುತಿಸಲಾಗಿದೆ. ಮತ್ತೊಬ್ಬ 45 ವರ್ಷದ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.

ಬಾಗಲಕೋಟೆಯಿಂದ ಮಂಗಳೂರು ಕಡೆ ಹೊಗುತ್ತಿದ್ದ ಬಸ್, ಮಾವಳ್ಳಿ ಕ್ರಾಸ್ ಬಳಿ ಇಂಡಿಕೇಟರ್ ಹಾಕದೇ ನಿಲ್ಲಿಸಿದ್ದ ಕೇರಳ ಮೂಲದ ಲಾರಿಗೆ ಡಿಕ್ಕಿಯಾಗಿದೆ. ವೇಗವಾಗಿ ಗುದ್ದಿದ ಪರಿಣಾಮ ಬಸ್ ಒಂದು ಬದಿ ಸಂಪೂರ್ಣ ನಜ್ಜು ಗುಜ್ಜಾಗಿದೆ. ಗಾಯಾಳುಗಳನ್ನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಾಯದಿಂದ ಬಸ್ ಚಾಲಕ, ನಿರ್ವಾಹಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಬಸ್ ಚಾಲಕನ ಮೇಲೆ ಪ್ರಕರಣ ದಾಖಲಾಗಿದೆ.‌

error: Content is protected !!