ಭರವಸೆ ನೀಡಿದ ಐದು ‘ಗ್ಯಾರಂಟಿ’ ಯೋಜನೆಗಳು ಜಾರಿ: ಮಲ್ಲಿಕಾರ್ಜುನ ಖರ್ಗೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಸಿದ್ದರಾಮಯ್ಯ ಸಿಎಂ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲೇ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಟ್ವೀಟ್‌ ಮಾಡಿದ್ದು , 6.5ಕೋಟಿ ಕನ್ನಡಿಗರಿಗೆ ಭರವಸೆ ನೀಡಿದ ಐದು ಗ್ಯಾರಂಟಿ ಜಾರಿಗೊಳಿಸುತ್ತೇವೆ ಎಂದಿದ್ದಾರೆ.

ಕರ್ನಾಟಕದ ಜನತೆಗೆ ಪ್ರಗತಿ, ಕಲ್ಯಾಣ ಮತ್ತು ಸಾಮಾಜಿಕ ನ್ಯಾಯ ಒದಗಿಸಲು ಟೀಂ ಕಾಂಗ್ರೆಸ್ ಬದ್ಧ. 6.5ಕೋಟಿ ಕನ್ನಡಿಗರಿಗೆ ಭರವಸೆ ನೀಡಿದ ಐದು ಗ್ಯಾರಂಟಿಗಳನ್ನು ನಾವು ಜಾರಿಗೊಳಿಸುತ್ತೇವೆ ಎಂದಿದ್ದಾರೆ. ಆ ಮೂಲಕ ಸಿದ್ದು, ಡಿಕೆಶಿ ಮತ್ತು ಖರ್ಗೆ ಏಕಕಾಲಕ್ಕೆ ಟ್ವೀಟ್‌ ಮಾಡುವ ಮೂಲಕ ಕಾಂಗ್ರೆಸ್‌ನಲ್ಲಿ ಒಗ್ಗಟ್ಟು ಇದೆ ಎನ್ನುವ ಸಂದೇಶ ರವಾನಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!