ಭಾರತದ ವಿರುದ್ಧದ ಕೊನೆಯ ಟಿ20 ಪಂದ್ಯದಲ್ಲಿ ಟಾಸ್​ ಗೆದ್ದ ವೆಸ್ಟ್​ ಇಂಡೀಸ್​ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದ ವಿರುದ್ಧದ ಕೊನೆಯ ಟಿ20 ಪಂದ್ಯದಲ್ಲಿ ವೆಸ್ಟ್​ ಇಂಡೀಸ್​ ಟಾಸ್​ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಭಾರತ ತಂಡದಲ್ಲಿ ನಾಲ್ಕು ಬದಲಾವಣೆ ಮಾಡಿಕೊಂಡಿದ್ದು, ವಿರಾಟ್ ಕೊಹ್ಲಿ, ರಿಷಭ್ ಪಂತ್, ಯುಜ್ವೇಂದ್ರ ಚಹಲ್​ ಮತ್ತು ಭುವನೇಶ್ವರ್ ಕುಮಾರ್​ ಬದಲಿಗೆ ರುತುರಾಜ್ ಗಾಯಕ್ವಾಡ್​, ಶ್ರೇಯಸ್ ಅಯ್ಯರ್​, ಶಾರ್ದೂಲ್​ ಠಾಕೂರ್​ ಮತ್ತು ಆವೇಶ್ ಖಾನ್ ಸ್ಥಾನ ಪಡೆದುಕೊಂಡಿದ್ದಾರೆ.
ಆವೇಶ್​ ಖಾನ್​ ಇದು ಮೊದಲ ಅಂತಾರಾಷ್ಟ್ರೀಯ ಪಂದ್ಯವಾಗಿದೆ.
ಇತ್ತ ವಿಂಡೀಸ್​ ತಂಡ ಕೂಡ 4 ಬದಲಾವಣೆ ಮಾಡಿಕೊಂಡಿದೆ, ಡೊಮೆನಿಕ್ ಡ್ರೇಕ್ಸ್​, ಶಾಯ್ ಹೋಪ್​, ಹೇಡನ್ ವಾಲ್ಶ್​ ಮತ್ತು ಫಾಬಿಯನ್ ಅಲೆನ್​ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ.

ವೆಸ್ಟ್ ಇಂಡೀಸ್ :  ಕೈಲ್ ಮೇಯರ್ಸ್, ಶಾಯ್ ಹೋಪ್, ನಿಕೋಲಸ್ ಪೂರನ್(ವಿಕೆಟ್ ಕೀಪರ್), ರೋವ್‌ಮನ್ ಪೊವೆಲ್, ಕೀರಾನ್ ಪೊಲಾರ್ಡ್(ನಾಯಕ), ಜೇಸನ್ ಹೋಲ್ಡರ್, ರೋಸ್ಟನ್ ಚೇಸ್, ರೊಮಾರಿಯೋ ಶೆಫರ್ಡ್, ಡೊಮಿನಿಕ್ ಡ್ರೇಕ್ಸ್, ಫ್ಯಾಬಿಯನ್ ಅಲೆನ್, ಹೇಡನ್ ವಾಲ್ಷ್

ಭಾರತ : ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿಕೆಟ್ ಕೀಪರ್​), ರೋಹಿತ್ ಶರ್ಮಾ (ನಾಯಕ), ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ವೆಂಕಟೇಶ್ ಅಯ್ಯರ್, ದೀಪಕ್ ಚಾಹರ್, ಶಾರ್ದೂಲ್ ಠಾಕೂರ್, ಹರ್ಷಲ್ ಪಟೇಲ್, ರವಿ ಬಿಷ್ಣೋಯ್, ಅವೇಶ್ ಖಾನ್

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!