ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ನೌಕಾಪಡೆಯ ಡೈರೆಕ್ಟರ್ ಜನರಲ್ ರಾಕೇಶ್ ಪಾಲ್ ಹೃದಯಾಘಾತದಿಂದ ಇಂದು ಚೆನ್ನೈನಲ್ಲಿ ವಿಧಿವಶರಾಗಿದ್ದಾರೆ.
ಇಂದು ಮಧ್ಯಾಹ್ನ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಹಿನ್ನೆಲೆಯಲ್ಲಿ ಐಎನ್ಎಸ್ ಅಡ್ಯಾರ್ ನೌಕೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದಾಗ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಚೆನ್ನೈನ ರಾಜೀವ್ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದ್ರೆ ವೈದ್ಯರ ಸತತ ಪ್ರಯತ್ನದ ಬಳಿಕವೂ ಚಿಕಿತ್ಸೆ ಪಲಿಕಾರಿಯಾಗದೆ ಅವರು ಸಂಜೆ 7 ಗಂಟೆ ಸುಮಾರಿಗೆ ವಿಧಿವಶರಾಗಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಹಾಗೂ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಜೀವ್ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆಗೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದ್ದಾರೆ.