Saturday, October 4, 2025

ಭೀಕರ ಅಪಘಾತ: ನಡುರಸ್ತೆಯಲ್ಲಿ ಧಗಧಗನೆ ಹೊತ್ತಿ ಉರಿದ ಬಸ್, 71 ಮಂದಿ ಸಜೀವ ದಹನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಫ್ಘಾನಿಸ್ತಾನದಲ್ಲಿ ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಬೆಂಕಿಗಾಹುತಿಯಾಗಿದ್ದು, ಘಟನೆಯಲ್ಲಿ 71 ಮಂದಿ ಸುಟ್ಟು ಕರಕಲಾಗಿದ್ದಾರೆ.

ಅಫ್ಘಾನಿಸ್ತಾನದ ಪಶ್ಚಿಮ ಹೆರಾತ್ ಪ್ರಾಂತ್ಯದಲ್ಲಿ ನಡೆದ ಅಪಘಾತದಲ್ಲಿ ಪ್ರಯಾಣಿಕರ ಬಸ್ಸೊಂದು ಟ್ರಕ್ ಮತ್ತು ಬೈಕ್​​ಗೆ ಡಿಕ್ಕಿ ಹೊಡೆದ ನಂತರ ಬೆಂಕಿ ಹೊತ್ತಿಕೊಂಡಿತ್ತು. ನೋಡ ನೋಡುತ್ತಲೇ ಜನರು ಸುಟ್ಟು ಕರಕಲಾಗಿದ್ದಾರೆ. 17 ಮಕ್ಕಳು ಸೇರಿದಂತೆ ಕನಿಷ್ಠ 71 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಸ್ ಇರಾನ್‌ನಿಂದ ಗಡಿಪಾರು ಮಾಡಲಾದ ಆಫ್ಘನ್ನರನ್ನು ಹೊತ್ತೊಯ್ಯುತ್ತಿತ್ತು ಮತ್ತು ಗಡಿ ದಾಟಿದ ನಂತರ ಕಾಬೂಲ್ ಕಡೆಗೆ ಪ್ರಯಾಣಿಸುತ್ತಿತ್ತು ಎಂದು ಪ್ರಾಂತೀಯ ಅಧಿಕಾರಿ ಮೊಹಮ್ಮದ್ ಯೂಸುಫ್ ಸಯೀದಿ ಎಎಫ್‌ಪಿಗೆ ತಿಳಿಸಿದ್ದಾರೆ.