January15, 2026
Thursday, January 15, 2026
spot_img

ಮಂಡ್ಯದಲ್ಲಿ ನಾಲೆ ನೀರಲ್ಲಿ ಕೊಚ್ಚಿ ಹೋದ ನಾಲ್ವರು ಮಕ್ಕಳು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಂಡ್ಯ ಜಿಲ್ಲೆಯಲ್ಲಿ ಬಟ್ಟೆ ತೊಳೆಯುವಾಗ ಕಾಲು ಜಾರಿ ಬಿದ್ದ ಬಾಲಕಿ ರಕ್ಷಣೆಗೆ ಮುಂದಾಗಿ ನಾಲ್ವರು ಮಕ್ಕಳು ನೀರುಪಾಲಾದ ದಾರುಣ ಘಟನೆ ನಡೆದಿದೆ. ಇಬ್ಬರು ಬಾಲಕಿಯರ ಮೃತದೇಹ ಪತ್ತೆಯಾಗಿದ್ದು, ಇನ್ನಿಬ್ಬರಿಗಾಗಿ ಹುಡುಕಾಟ ಮುಂದುವರಿದಿದೆ.

ನೀರಿನಲ್ಲಿ ಮುಳುಗಿದ್ದ ಓರ್ವ ಬಾಲಕಿಯನ್ನು ನಿನ್ನೆಯೇ ರಕ್ಷಣೆ ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಬಾಲಕಿ ಆಯಿಷಾ (14) ಮೃತಪಟ್ಟಿದ್ದಾಳೆ. ಇಂದು ಆಫ್ರಿನ್ (13) ಮೃತದೇಹ ಪತ್ತೆಯಾಗಿದೆ. ನಾಪತ್ತೆಯಾಗಿರುವ ಹನಿ (14), ಥರ್ಬಿಮ್ (13)ಗಾಗಿ ಹುಡುಕಾಟ ನಡೆದಿದೆ. ಮಕ್ಕಳಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ.

ಮೈಸೂರಿನ ಶಾಂತಿನಗರದ ಮದರಸದಿಂದ ಮಕ್ಕಳು ಪ್ರವಾಸಕ್ಕೆ ಬಂದಿದ್ದರು. 15 ಮಕ್ಕಳು ಹಾಗೂ ಮೂವರು ಸಿಬ್ಬಂದಿ ಪ್ರವಾಸಕ್ಕೆ ಪ್ರವಾಸಕ್ಕೆ ಬಂದಿದ್ದರು. ಶ್ರೀರಂಗಪಟ್ಟಣ ತಾಲೂಕಿನ ಮಂಡ್ಯ ಕೊಪ್ಪಲು ಬಳಿಯ ನಾಲೆಯಲ್ಲಿ ಈ ಅವಘಡ ಸಂಭವಿಸಿದೆ. ನಾಲೆಯಲ್ಲಿ ಇಳಿದು ಆಟವಾಡಲು ಮಕ್ಕಳು ಮುಂದಾಗಿದ್ದರು. ಈ ವೇಳೆ ನೀರಿನ ರಭಸಕ್ಕೆ ಮಕ್ಕಳು ಕೊಚ್ಚಿ ಹೋಗಿದ್ದಾರೆ.

Must Read

error: Content is protected !!