ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋಲಾರದಲ್ಲಿ ಶಾಲಾ ಪ್ರಾಂಶುಪಾಲರು, ಶಿಕ್ಷಕರ ಎದುರಲ್ಲೇ ವಿದ್ಯಾರ್ಥಿಗಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛತೆ ಮಾಡಿಸಿರುವ ಅಮಾನವೀಯ ಘಟನೆ ನಡೆದಿದೆ.
ಜಿಲ್ಲೆ ಮಾಲೂರು ತಾಲ್ಲೂಕು ಯಲವಳ್ಳಿ ಗ್ರಾಮದ ಬಳಿ ಇರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರಾಂಶುಪಾಲರ ಎದುರಲ್ಲೇ ಸಿಬ್ಬಂದಿ, ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಕ್ಲೀನ್ ಮಾಡಿಸಿದ್ದಾರೆ.
ಅಮಾನವೀಯ ಕೃತ್ಯದ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಸತಿ ಶಾಲೆಯಲ್ಲಿ ಸುಮಾರು 250 ಮಕ್ಕಳಿದ್ದಾರೆ.
ಅಮಾನತಿಗೆ ಆದೇಶ
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಂಶುಪಾಲರು ವಾರ್ಡನ್, ಸೇರಿದಂತೆ ಎಲ್ಲರನ್ನು ಮಾಡಿ ಎಲ್ಲರನ್ನೂ ಅಮಾನತು ಮಾಡಿ ತನಿಖೆ ನಡೆಸಿ ಎಂದು ಹೇಳಿದ್ದೇನೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವ HC ಮಹಾದೇವಪ್ಪ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಕ್ಕಳಿಂದ ಗುಂಡಿ ಕ್ಲೀನ್ ಮಾಡಿಸಿದ ಪ್ರಕರಣದ ಕುರಿತು ಬಂದಿದೆ.ಘಟನೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದು ಎಲ್ಲರನ್ನೂ ಸಸ್ಪೆಂಡ್ ಮಾಡಿ ವರದಿ ಕೊಡುವಂತೆ ಹೇಳಿದ್ದೇನೆ ಎಂದರು.
ಇಂತಹ ಘಟನೆಗಳು ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ನಡೆಯದಂತೆ ಸುತ್ತೋಲೆ ಹೊರಡಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ.ಕೋಲಾರ ಪ್ರಕರಣವನ್ನು ಸಚಿವ HC ಮಾದೇವಪ್ಪಾ.ಗಂಭೀರವಾಗಿ ಪರಿಗಣಿಸಿದ್ದಾರೆ. ರಾಜ್ಯಾದ್ಯಂತ ಸುತ್ತೋಲೆ ಹೊರಡಿಸುವಂತೆ ತಿಳಿಸಿದ್ದಾರೆ.ಮಾಲೂರು ತಾಲೂಕಿನ ಎಳವಳ್ಳಿ ಬಳಿಯ ಶಾಲೆ ಶೌಚಾಲಯ ಕ್ಲೀನ್ ಮಾಡಿಸಿದವರನ್ನು ಅಮಾನತು ಮಾಡುತ್ತೇವೆ ಶಿಕ್ಷಕ ಅಭಿಷೇಕ್ನನ್ನು ಕೆಲಸದಿಂದ ತೆಗೆದುಹಾಕುತ್ತೇವೆ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಶ್ರೀನಿವಾಸ್ ಹೇಳಿಕೆ ನೀಡಿದ್ದಾರೆ.