Friday, September 5, 2025

ಮಗನಿಲ್ಲದೇ ಬದುಕೋಕೆ ಸಾಧ್ಯವೇ ಇಲ್ಲ: ಮೃತದೇಹ ಮನೆ ತಲುಪುವ ಮುನ್ನ ಕೆರೆಗೆ ಬಿದ್ದ ತಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಗನ ಸಾವಿನಿಂದ ಮನನೊಂದ ತಾಯಿ, ಮೃತದೇಹ ಸಿಗುವ ಮುನ್ನವೇ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕೊಳಮಾಗೆ ಗ್ರಾಮದಲ್ಲಿ ನಡೆದಿದೆ.

ಮೃತರನ್ನ ರವಿಕಲಾ (48) ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಗಾಡಿ ಭದ್ರಾ ನದಿಗೆ ಬಿದ್ದ ಪರಿಣಾಮ ರವಿಕಲಾ ಪುತ್ರ ಶಮಂತ್ (23) ಸಾವನ್ನಪ್ಪಿದ್ದ.

ಮಲೆನಾಡಲ್ಲಿ ಧಾರಾಕಾರವಾಗಿ ಸುರಿಯುತ್ತಿದ್ದ ಮಳೆಯಿಂದಾಗಿ ಪಿಕಪ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯೊಡೆದು ಪಕ್ಕದಲ್ಲೇ ಹರಿಯುತ್ತಿದ್ದ ಭದ್ರಾ ನದಿಗೆ ಉರುಳಿ ಬಿದ್ದು ಶಮಂತ್ ಸಾವನ್ನಪ್ಪಿದ್ದ. ಶಮಂತ್ ಪಿಕಪ್‌ನಲ್ಲಿ ಕಾಫಿ ತೋಟಕ್ಕೆ ಕಾರ್ಮಿಕರ ಟ್ರಿಪ್ ಹೊಡೆಯುತ್ತಿದ್ದ. ಗುರುವಾರ ಸಂಜೆ ಬಾಡಿಗೆ ಇದೆ ಎಂದು ಕಳಸಕ್ಕೆ ಬಂದು ವಾಪಸ್ ಗ್ರಾಮಕ್ಕೆ ಹೋಗುವಾಗ ಈ ಅವಘಡ ಸಂಭವಿಸಿತ್ತು. ವಿಷಯ ಕೇಳಿದ ತಾಯಿಗೆ ಆಘಾತವಾಗಿದ್ದು, ಮಗನ ಜೊತೆಗೇ ಹೋಗುತ್ತೇನೆ ಎಂದು ಕೆರೆಗೆ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇದನ್ನೂ ಓದಿ