ಮಣಿಪುರದಲ್ಲಿ ಮತ್ತೆ ಗುಂಡಿನ ಚಕಮಕಿ:13 ಮಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಣಿಪುರದ ತೆಂಗ್ನೌಪಾಲ್ ಜಿಲ್ಲೆಯಲ್ಲಿ ಇಂದು ಮ್ಯಾನ್ಮಾರ್​ಗೆ ತೆರಳುತ್ತಿದ್ದ ಗುಂಪಿನ ಮೇಲೆ ಬಂಡುಕೋರರ ಪಡೆ ಗುಂಡಿನ ದಾಳಿ ನಡೆಸಿದ್ದು, ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ.

ಇದರಿಂದ ಕೆಲ ದಿನಗಳಿಂದ ಶಾಂತವಾಗಿದ್ದ ಗುಡ್ಡಗಾಡು ರಾಜ್ಯ ಮಣಿಪುರದಲ್ಲಿ ಮತ್ತೆ ಗುಂಡಿನ ಮೊರೆತ ಕೇಳಿ ಬಂದಿದೆ.

ಭದ್ರತಾ ಪಡೆಯಿಂದ ಘಟನೆ ನಡೆದ ಗ್ರಾಮದಲ್ಲಿ ಹೈಅಲರ್ಟ್​ ಘೋಷಿಸಲಾಗಿದೆ.

ದಾಳಿಯ ವೇಳೆ ಎರಡೂ ಗುಂಪುಗಳ ಮಧ್ಯೆ ಗುಂಡಿನ ಚಕಮಕಿ ನಡೆದಿದೆ. ಸಾವಿಗೀಡಾದವರ ಗುರುತು ಪತ್ತೆಯಾಗಿಲ್ಲ. ಇವರ್ಯಾರೂ ಸ್ಥಳೀಯರಲ್ಲ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಭದ್ರತಾ ಪಡೆಗಳು ಇದುವರೆಗೆ 13 ಶವಗಳನ್ನು ಪತ್ತೆ ಮಾಡಿವೆ ಎಂದು ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!