ಮೂರನೇ ಟಿ20 ಪಂದ್ಯ: ವೆಸ್ಟ್‌ ಇಂಡೀಸ್‌ ಟಾಸ್‌ ಗೆದ್ದ ಭಾರತ ಫೀಲ್ಡಿಂಗ್‌ ಆಯ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ವೆಸ್ಟ್‌ ಇಂಡೀಸ್‌ ತಂಡದ ವಿರುದ್ಧ ಮೂರನೇ ಟಿ20 ಪಂದ್ಯದಲ್ಲಿ ಭಾರತ ಟಾಸ್‌ ಗೆದ್ದಿದ್ದು ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡಿದೆ.
ಮೊದಲ ಟಿ20 ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ಕಂಡಿದ್ದರೆ, 2ನೇ ಪಂದ್ಯದಲ್ಲಿ ಹೀನಾಯ ಸೋಲು ಕಂಡಿತ್ತು.
ಸೋಮವಾರ ಪಂದ್ಯ ನಡೆದ ಪಿಚ್‌ನಲ್ಲಿಯೇ 3ನೇ ಟಿ20 ಪಂದ್ಯ ನಡೆಯಲಿದೆ. 5 ಪಂದ್ಯಗಳ ಟಿ20 ಸರಣಿಯಲ್ಲಿ ಉಭಯ ತಂಡಗಳು ತಲಾ 1 ಪಂದ್ಯ ಗೆದ್ದುಕೊಂಡಿವೆ.
ಪಂದ್ಯಕ್ಕಾಗಿ ತಂಡದಲ್ಲಿ ಒಂದು ಬದಲಾವಣೆ ಮಾಡಿದ್ದು, ರವೀಂದ್ರ ಜಡೇಜಾಗೆ ಸ್ವಲ್ಪ ವಿಶ್ರಾಂತಿ ನೀಡಿದ್ದು, ಅವರ ಬದಲು ದೀಪಕ್‌ ಹೂಡಾ ಸ್ಥಾನ ಪಡೆದಿದ್ದಾರೆ ಎಂದು ರೋಹಿತ್ ಶರ್ಮ ಟಾಸ್‌ ವೇಳೆ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!