ಮೋದಿಯವರಂತೆ ಸುಳ್ಳು ಹೇಳುವ ಪ್ರಧಾನಿಯನ್ನು ನಾನು ನೋಡಿಲ್ಲ: ಮಹಾರಾಷ್ಟ್ರದಲ್ಲಿ ಸಿದ್ದರಾಮಯ್ಯ ವಾಗ್ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪ್ರಧಾನಿ ನರೇಂದ್ರ ಮೋದಿ ಅವರನ್ನು ದೊಡ್ಡ ಸುಳ್ಳುಗಾರ, ಅವರು ಹೇಳಿದ ಒಳ್ಳೆಯ ದಿನಗಳು ಎಲ್ಲಿದೆ ಎಂದುಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಮಹಾ ನಿರ್ಧಾರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿ ಮತ್ತು ಸಂಘ-ಪರಿವಾರ ಜನರನ್ನು ವಿಭಜಿಸಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರಿಗೆ ಭಾರತದ ಮೂಲೆ ಮೂಲೆಗಳಿಗೆ ಹೋಗಿ ಅವರ ಬಿಜೆಪಿಯ ಕುತಂತ್ರಗಳನ್ನು ಬಹಿರಂಗಪಡಿಸಿ ಕಾಂಗ್ರೆಸ್ ಅನ್ನು ಮತ್ತೆ ಅಧಿಕಾರಕ್ಕೆ ತರುವಂತೆ ಮನವಿ ಮಾಡಿದರು.

ನನ್ನ 40 ವರ್ಷಗಳ ರಾಜಕೀಯ ಜೀವನದಲ್ಲಿ ಮೋದಿಯವರಂತೆ ಸುಳ್ಳು ಹೇಳುವ ಪ್ರಧಾನಿಯನ್ನು ನಾನು ನೋಡಿಲ್ಲ. 2014 ರಲ್ಲಿ, ಅವರು ಜನರ ಬ್ಯಾಂಕ್ ಖಾತೆಗಳಿಗೆ 15 ಲಕ್ಷ ರೂಪಾಯಿಗಳನ್ನು ಜಮಾ ಮಾಡುವುದಾಗಿ ಭರವಸೆ ನೀಡಿದರು, ಎರಡು ಕೋಟಿ ಉದ್ಯೋಗಗಳನ್ನು ಸೃಷ್ಟಿಸಿದರು ಮತ್ತು ‘ಅಚ್ಛೇ ದಿನ್’ (ಒಳ್ಳೆಯ ದಿನಗಳು) ತರುವುದಾಗಿ ಹೇಳಿದ್ದರು. ಒಳ್ಳೆಯ ದಿನಗಳು ಏನಾದವು? (ಅಚ್ಚೇ ದಿನ್ ಕಾ ಕ್ಯಾ ಹುವಾ?) ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.

ಕರ್ನಾಟಕ ಚುನಾವಣೆಯ ಸಂದರ್ಭದಲ್ಲಿ, ನಾನು ಮತ್ತು ಡಿ ಕೆ ಶಿವಕುಮಾರ್ ಅವರು ರಾಜ್ಯದ ಮೂಲೆ ಮೂಲೆಗಳಲ್ಲಿ ಸಂಚರಿಸಿ ಜನರಿಗೆ ಬಿಜೆಪಿಯ ಕೆಟ್ಟ ಆಡಳಿತ ಮತ್ತು ಅವರು ಮಾಡಿರುವ ಭ್ರಷ್ಟಾಚಾರವನ್ನು ವಿವರಿಸಿದ್ದೆವು. ಇದರಿಂದಾಗಿ ಅತಿ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲು ಸಹಾಯವಾಯಿತು ಎಂದು ಹೇಳಿದರು.

ಮುಂಬರುವ 2024ರ ಲೋಕಸಭಾ ಚುನಾವಣೆ ಮತ್ತು ವಿವಿಧ ರಾಜ್ಯಗಳಲ್ಲಿ ನಡೆಯುವ ವಿಧಾನಸಭಾ ಚುನಾವಣೆಗಳ ಸಂದರ್ಭದಲ್ಲಿ ಇದು ಪುನರಾವರ್ತನೆಯಾಗಬೇಕು. ಬಿಜೆಪಿಯ ಭ್ರಷ್ಟ ಆಡಳಿತದ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!