ಮೋದಿ ನಿಂದನೆ ಆರೋಪ: ಯೂತ್​​ ಕಾಂಗ್ರೆಸ್​ ಅಧ್ಯಕ್ಷ ನಲಪಾಡ್ ವಿರುದ್ಧ ದೂರು ದಾಖಲು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಆರೋಪದಡಿ ಯೂತ್​​ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ವಿರುದ್ಧ ಚಿಕ್ಕಮಗಳೂರು ಜಿಲ್ಲೆಯಲ್ಲಿ ದೂರು ದಾಖಲಾಗಿದೆ.

ರಾಹುಲ್ ಗಾಂಧಿ ಬೆಂಬಲಿಸಿ ಪ್ರತಿಭಟನೆಯ ವೇಳೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ಮೊಹಮ್ಮದ್ ನಲಪಾಡ್ ಅವಹೇಳನಕಾರಿ ಭಾಷಣ ಮಾಡಿದ್ದಾರೆ. ಹೀಗಾಗಿ ಮೊಹಮ್ಮದ್ ನಲಪಾಡ್ ವಿರುದ್ಧ ದೂರು ನೀಡಲಾಗಿದೆ ಎಂದು ಬಿಜೆಪಿ ಮುಖಂಡ ಪ್ರದೀಪ್ ನಾಯಕ್ ತಿಳಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರದೀಪ್ ನಾಯಕ್ ದೂರು ನೀಡಿದ್ದು, ಎಫ್‌ಐಆರ್ ದಾಖಲು ಮಾಡುವಂತೆ ಕೋರಿ ಬಿಜೆಪಿ ಮುಖಂಡ ಪ್ರದೀಪ್ ನಾಯಕ್ ಕೋರ್ಟ್ ಮೊರೆ ಹೋಗಿದ್ದಾರೆ. ಮೊಹಮ್ಮದ್ ನಲಪಾಡ್ ವಿರುದ್ಧ ಎಫ್‌ಐಆರ್ ದಾಖಲು ಮಾಡುವಂತೆ ಕಡೂರಿನ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ಪ್ರದೀಪ್ ನಾಯಕ್ ಅರ್ಜಿ ಸಲ್ಲಿಸಿದ್ದಾರೆ.

2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದರು. ಇದೇ ವಿಷಯಕ್ಕೆ ರಾಹುಲ್‌ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಪ್ರಧಾನಿ ಮೋದಿ ವಿರುದ್ಧ ಮೊಹಮ್ಮದ್ ನಲಪಾಡ್ ಕೂಡ ಅವಹೇಳನಕಾರಿ ಭಾಷಣ ಮಾಡಿದ್ದಾರೆ ಎಂದು ನಾಯಕ್ ತಾವು ಸಲ್ಲಿಸಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!