Monday, September 22, 2025

ಯಡಿಯೂರಪ್ಪರನ್ನ ಸಿಎಂ ಸ್ಥಾನದಿಂದ ತೆಗೆದಾಗ ಬಿಜೆಪಿಯವ್ರು ಎಲ್ಲಿ ಹೋಗಿದ್ರು?: ಬಿ.ಕೆ.ಹರಿಪ್ರಸಾದ್‌ ಪ್ರಶ್ನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹೈಕಮಾಂಡ್ ನಿರ್ದೇಶನ ಮೇರೆಗೆ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಲಾಗಿದೆ. ಕೆಲವು ವಿಚಾರಕ್ಕೆ ಪಕ್ಷದಲ್ಲಿ ಶಿಸ್ತು ಮೀರಿ ಹೋದಾಗ ಇಂತಹ ಕ್ರಮ ಆಗುತ್ತವೆ ಎಂದು ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.

ರಾಜಣ್ಣನಿಗೆ ಅನ್ಯಾಯ ಆಗಿದೆ ಎಂದು ಬಿಜೆಪಿ ನಾಯಕರು ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ. ಪಾಪ ಬಿಜೆಪಿ ಸತ್ಯಹರಿಶ್ಚಂದ್ರರು, ಯಡಿಯೂರಪ್ಪರನ್ನ ಸಿಎಂ ಸ್ಥಾನದಿಂದ ತೆಗೆದು ಹಾಕಿದಾಗ ಎಲ್ಲಿ ಹೋಗಿದ್ದರು? ಈ ಸತ್ಯವಂತರು, ಜಗದೀಶ್ ಶೆಟ್ಟರ್, ಬಸನಗೌಡ ಪಾಟೀಲ್ ಯತ್ನಾಳರನ್ನ ಆರು ವರ್ಷ ವಜಾ ಮಾಡಿದಾಗ ಈ ಸತ್ಯವಂತರು ಎಲ್ಲಿ ಹೋಗಿದ್ದರು ಎಂದು ಟಾಂಗ್‌ ಕೊಟ್ಟಿದ್ದಾರೆ.

ಇದನ್ನೂ ಓದಿ