Sunday, September 7, 2025

ರಷ್ಯಾದ ಕರಾವಳಿಯಲ್ಲಿ 8.7 ತೀವ್ರತೆಯ ಭಾರೀ ಭೂಕಂಪ: ಅಮೆರಿಕ, ಜಪಾನ್‌ಗೆ ಸುನಾಮಿ ಕಂಟಕ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಷ್ಯಾದ ಕರಾವಳಿ ಪ್ರದೇಶದಲ್ಲಿ 8.7 ತೀವ್ರತೆಯ ಭಾರೀ ಭೂಕಂಪ ಸಂಭವಿಸಿದೆ. ಇದು 1952ರ ಬಳಿಕ ಸಂಭವಿಸಿದ ಅತೀ ಪ್ರಬಲ ಭೂಕಂಪವಾಗಿದೆ. ಅಮೆರಿಕದ ಅಲಾಸ್ಕಾದ ಭಾಗಗಳು ಹಾಗೂ ಜಪಾನ್‌ಗೆ ಸುನಾಮಿ ಎಚ್ಚರಿಕೆ ನೀಡಲಾಗಿದೆ.

ಇಲ್ಲಿನ ಪೂರ್ವ ಕಮ್ಚಟ್ಕಾ ದ್ವೀಪದ ಪೆನಿನ್ಸುಲಾದಲ್ಲಿರುವ ಪೆಟ್ರೋಪಾವ್ಲೋವ್ಸಕ್‌ ನಿಂದ ಸುಮಾರು 136 ಕಿಲೋಮೀಟರ್ ದೂರದಲ್ಲಿ ಸಂಭವಿಸಿದೆ. 19 ಕಿಮೀ ಆಳದಲ್ಲಿ ಕೇಂದ್ರ ಬಿಂದು ಪತ್ತೆಯಾಗಿದ್ದು, 4 ಮೀಟರ್‌ವರೆಗಿನ ಸುನಾಮಿ ಅಪ್ಪಳಿಸಿದೆ. 

ಅಮೆರಿಕದ ಅಧಿಕಾರಿಗಳು ಅಲಾಸ್ಕಾದ ಭಾಗಗಳಿಗೆ ಸುನಾಮಿ ಎಚ್ಚರಿಕೆ ನೀಡಿದೆ. ಈ ಬೆನ್ನಲ್ಲೇ ಜಪಾನ್‌ನ ಹವಾಮಾನ ಇಲಾಖೆಯು ಸುನಾಮಿ ಎಚ್ಚರಿಕೆ ನೀಡಿದೆ. ಕಮ್ಚಟ್ಕಾದ ಕೆಲವು ಭಾಗಗಳಲ್ಲಿ 3-4 ಮೀಟರ್ ಎತ್ತರದ ಸುನಾಮಿ ದಾಖಲಾಗಿರುವುದಾಗಿ ಪ್ರಾದೇಶಿಕ ಸಚಿವ ಸೆರ್ಗೆಯ್ ಲೆಬೆಡೆವ್ ತಿಳಿಸಿದ್ದಾರೆ.

ಇದನ್ನೂ ಓದಿ