ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಭ್ರಷ್ಟಾಚಾರ ಆರೋಪಗಳು ಕೇಳಿಬಂದ ಹಿನ್ನೆಲೆ ಯುವಜನ ಸೇವಾ, ಕ್ರೀಡಾ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ (B Nagendra) ಗುರುವಾರ ರಾಜೀನಾಮೆ ನೀಡಿದ್ದರು.ಇದೀಗ ಅವರ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕಾರ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಶಿಫಾರಸಿನ ಮೇರೆಗೆ ಬಿ.ನಾಗೇಂದ್ರ ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನು ರಾಜ್ಯಪಾಲರು ಅನುಮೋದಿಸಿದ್ದಾರೆ.
ಭಾರತದ ಸಂವಿಧಾನದ 164 (1) ನೇ ವಿಧಿಯಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ನಾಗೇಂದ್ರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.