Wednesday, October 29, 2025

ರಾಜ್ಯಾದ್ಯಂತ ತಟ್ಟಿದೆ ಸಾರಿಗೆ ನೌಕರರ ಮುಷ್ಕರದ ಬಿಸಿ: ಬಸ್‌ ಇಲ್ಲದೆ ವಿದ್ಯಾರ್ಥಿಗಳ ಪರದಾಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇಂದಿನಿಂದ ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ಆರಂಭವಾಗಿದ್ದು, ಪ್ರಯಾಣಿಕರು ಬಸ್‌ ಇಲ್ಲದೆ ಪರದಾಡಿದ್ದಾರೆ. ರಾಜ್ಯದ ಬಹುತೇಕ ಕಡೆ ಇದೇ ಪರಿಸ್ಥಿತಿ ಇದ್ದು, ಶಾಲಾ – ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಪರದಾಡಿದ್ದಾರೆ.

ರಾಜ್ಯಾದ್ಯಂತ ಸಾರಿಗೆ ನೌಕರ ಮುಷ್ಕರ ಹಿನ್ನೆಲೆ, ಯಾದಗಿರಿಯಲ್ಲಿ ಸಾರಿಗೆ ಬಸ್ ಸಂಚಾರ ಸ್ತಬ್ಧಗೊಂಡಿದೆ. ಬೆಳಗ್ಗೆಯಿಂದಲೇ ಸಾರಿಗೆ ನೌಕರರಿ ಕರ್ತವ್ಯಕ್ಕೆ ಗೈರಾದ ಕಾರಣಬಸ್ ನಿಲ್ದಾಣದಿಂದ ಬಸ್ ಗಳು ಹೊರ ಬಾರದೆ ನಿಂತಿವೆ. ಸಾರಿಗೆ ಸಂಚಾರವಿಲ್ಲದೇ ದೂರದೂರಿನ ಪ್ರಯಾಣಿಕರ ಪರದಾಟ ನಡೆಸಿದ ದೃಶ್ಯ ಕಂಡು ಬಂದಿತು.

ಕೆಎಸ್ ಆರ್ ಟಿಸಿ ಡಿಸಿ ಸುನೀಲ್ ಚಂದರಗಿ ಸಾರಿಗೆ ನೌಕರರ ಮನವೊಲಿಸಿ ಸಾರಿಗೆ ಸಂಚಾರ ಆರಂಭಿಸಲು ಯತ್ನಿಸಿದರೂ ಫಲ ಸಿಕ್ಕಿಲ್ಲ. ಇತ್ತ ಮುಷ್ಕರದ ಬಿಸಿ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ತಟ್ಟಿದೆ. ಬಸ್ ಸಂಚಾರವಿಲ್ಲದೇ ಶಾಲಾ, ಕಾಲೇಜು ವಿದ್ಯಾರ್ಥಿಗಳ ಪರದಾಡುವಂತಾಯಿತು.

ಕಲಬುರಗಿಯಲ್ಲಿ ವಿದ್ಯಾರ್ಥಿಗಳ ಪರದಾಟ

ಅನಿರ್ದಿಷ್ಟಾವಧಿ ಮುಷ್ಕರದ ಬಿಸಿ ಕಲಬುರಗಿಗೂ ತಟ್ಟಿದ್ದು, ನಗರದಲ್ಲಿ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಕಲಬುರಗಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್ ಸಂಚಾರವಿಲ್ಲದೇ ಪ್ರಯಾಣಿಕರು ಬೆಳ್ಳಂಬೆಳಗ್ಗೆ ಪರದಾಡುವಂತಾಗಿದ್ದು,ಖಾಸಗಿ ವಾಹನಗಳ ಮೂಲಕ ಬೇರೆ ಬೇರೆ ಊರುಗಳಿಗೆ ತೆರಳುತ್ತಿರುವುದು ಕಂಡು ಬಂದಿದೆ.

ಇನ್ನು ಬೆಳ್ಳಂಬೆಳಗ್ಗೆ ಸಾರಿಗೆ ಸಂಚಾರ ಸ್ಥಗಿತಗೊಂಡ ಹಿನ್ನೆಲೆಯಲ್ಲಿ, ಪ್ರಯಾಣಿಕರ ಜೊತೆ ಜೊತೆಗೆ ವಿದ್ಯಾರ್ಥಿಗಳಿಗೆ ತೊಂದರೆ ಅನುಭವಿಸುವುದು ಪರಿಸ್ಥಿತಿ ಕೇಂದ್ರ ಬಸ್ ನಿಲ್ದಾಣದಲ್ಲಿ ಕಂಡುಬಂದಿದೆ.

error: Content is protected !!