ರಾಜ್ಯ ಸಂಪೂರ್ಣ ಬಿಜೆಪಿಮಯ ಆಗುವುದರಲ್ಲಿ ಸಂಶಯವಿಲ್ಲ : ಸಿಎಂ ಬೊಮ್ಮಾಯಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಬಂದ ಮೇಲೆ ರಾಜ್ಯ ಸಂಪೂರ್ಣ ಬಿಜೆಪಿಮಯ ಆಗುವುದರಲ್ಲಿ ಸಂಶಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಜಯವಾಹಿನಿ ರೋಡ್ ಶೋ ಕಾರ್ಯಕ್ರಮಕ್ಕೆ ಜನಬೆಂಬಲ ವ್ಯಕ್ತವಾಗುತ್ತಿದೆ. ಜನರ ಉತ್ಸಾಹವೇ ರಾಜ್ಯದ ತುಂಬಾ ಬಿಜೆಪಿ ಅಲೆ ಇರುವುದಕ್ಕೆ ಸಾಕ್ಷಿಯಾಗಿದೆ ಎಂದರು.

ಅಮಿತ್ ಶಾ ಅವರು ಚುನಾವಣಾ ವಿಚಾರವಾಗಿ ಕೆಲ‌ವು ಸಲಹೆ ಸೂಚನೆ ನೀಡಿದ್ದು, ಪ್ರಧಾನಿಯಿಂದ ಹಿಡಿದ ಪ್ರಮುಖರ ಕಾರ್ಯಕ್ರಮಗಳ ಮರು ಅವಲೋಕನ ಮಾಡಲು ಹೇಳಿದ್ದು ಕೆಲವು ಕಾರ್ಯಕ್ರಮಗಳನ್ನು ಇಂದು ರಾತ್ರಿ ಪರಿಶೀಲಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ನನ್ನ ಮೇಲೆ ಸಿದ್ದರಾಮಯ್ಯ ಮಾಡಿರುವ ಆರೋಪ ಸಾಬೀತು ಮಾಡಲಿ. ನನ್ನ ಮೇಲೆ ಸುಮ್ಮನೆ ಆರೋಪ ಮಾಡುತ್ತಿರುವುದು ಜನರಿಗೆ ಗೊತ್ತಿದೆ. ಸಿದ್ಧರಾಮಯ್ಯ ಅವರ ಮೇಲೆ ಸಾಕಷ್ಟು ಪ್ರಕರಣಗಳಿವೆ. ಸಿದ್ದರಾಮಯ್ಯ ಅವರು ಸುಳ್ಳು ಹೇಳಿ ಸಿಕ್ಕಿಹಾಕಿಕೊಂಡಿದ್ದಾರೆ. ಅವರ ಮೇಲಿನ ಪ್ರಕರಣಗಳ ಕುರಿತು ಲೋಕಾಯುಕ್ತ ತನಿಖೆಗೆ ಸಹ ನೀಡಲಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!