ರಾಷ್ಟ್ರಪತಿಗಳಿಗೆ ನೀಡಿದರು ಪರಿಶುದ್ಧ ಬೆಳ್ಳಿಯ ಚಾಮುಂಡೇಶ್ವರಿ ವಿಗ್ರಹ ಉಡುಗೊರೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 
ಮೈಸೂರು ದಸರಾ ಮಹೋತ್ಸವವನ್ನು ಇಂದು ಉದ್ಘಾಟನೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಚಾಮುಂಡೇಶ್ವರಿ ದೇವಿಯ ವಿಗ್ರಹವನ್ನು ಉಡುಗೊರೆಯಾಗಿ ನೀಡಲಾಯಿತು.

92.5% ಪರಿಶುದ್ಧ ಬೆಳ್ಳಿಯಿಂದ ಕೂಡಿರುವ ಚಾಮುಂಡೇಶ್ವರಿ ದೇವಿಯ ಮೂರ್ತಿಯನ್ನು ರಾಜಸ್ಥಾನದ ಜೈಪುರ್​ನ ಕರಕುಶಲಕಾರರಿಂದ ವಿನ್ಯಾಸಗೊಳಿಸಲಾಗಿದೆ. ಚಾಮುಂಡೇಶ್ವರಿ ದೇವಿಯ ಉಡುಗೊರೆ 4.25 ಕೆಜಿ ತೂಕವನ್ನು ಹೊಂದಿದೆ.

ಇನ್ನೂ ವಿಶೇಷವೆಂದರೆ, ದಸರಾ ಉದ್ಘಾಟನೆಗೆ ಆಹ್ವಾನಿಸಲು ದೆಹಲಿಗೆ ಹೋಗಿದ್ದಾಗ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್ ಉಡುಗೊರೆಯಾಗಿ ನೀಡಿದ್ದ ಸೀರೆಯನ್ನುಟ್ಟುಕೊಂಡೇ ರಾಷ್ಟ್ರಪತಿ ಇಂದು ಸಾಂಸ್ಕೃತಿಕ ನಗರಿಗೆ ಆಗಮಿಸಿದ್ದರು. ವಿಶೇಷವೆಂದರೆ ಉಡುಗೊರೆ ನೀಡಿದ್ದ ಸುಮಾರು 70 ಸಾವಿರ ರೂ. ಬೆಲೆಯ ಮೈಸೂರು ರೇಷ್ಮೆ ಸೀರೆಯನ್ನುಟ್ಟುಕೊಂಡೇ ಸಾಂಸ್ಕೃತಿಕ ನಗರಿಗೆ ಆಗಮಿಸಿದ ರಾಷ್ಟ್ರಪತಿಗಳು ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ದಸರಾ ಮಹೋತ್ಸವ ಉದ್ಘಾಟಿಸಿದರು.

ರಾಷ್ಟ್ರಪತಿಯವರು ಬಿಳಿ ಸೀರೆ ಇಷ್ಟಪಡುತ್ತಾರೆ ಎಂಬ ಕಾರಣಕ್ಕೆ ಸರ್ಕಾರಿ ಸ್ವಾಮ್ಯದ ಕೆ.ಎಸ್.ಐ.ಸಿ.ಯ ಸರ್ಕಾರಿ ರೇಷ್ಮೆ ಕಾರ್ಖಾನೆಗೆ ಈ ಉಡುಪು ತಯಾರಿಕೆಗೆ ಆದೇಶ ನೀಡಿ, ಸಿದ್ಧಪಡಿಸಲು ಸೋಮಶೇಖರ್ ಸೂಚಿಸಿದ್ದರು. ದ್ರೌಪದಿ ಮುರ್ಮು ಅವರು ಇಷ್ಟಪಡುವ ನೈಸರ್ಗಿಕ ಬಿಳಿ ಬಣ್ಣದ ಈ ಸೀರೆಯನ್ನು ಗೌರವಸೂಚಕವಾಗಿ ಅವರಿಗೆ ಸಮರ್ಪಿಸಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!