ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರ ರಾಜಧಾನಿ ದೆಹಲಿಯ ಕರವಾಲ್ ನಗರದಲ್ಲಿ ಒಬ್ಬ ವ್ಯಕ್ತಿ ತನ್ನ ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳನ್ನು ಕೊಂದು ಸ್ಥಳದಿಂದ ಪರಾರಿಯಾಗಿದ್ದಾರೆ.
ಆರೋಪಿಯನ್ನು ಪ್ರದೀಪ್ ಎಂದು ಗುರುತಿಸಲಾಗಿದೆ ಈತ ತನ್ನ ಪತ್ನಿ ಜಯಶ್ರೀ ಮತ್ತು ಐದು ಮತ್ತು ಏಳು ವರ್ಷದ ಪುತ್ರಿಯರನ್ನು ಕೊಂದಿದ್ದಾರೆ. ಸದ್ಯದ ಮಾಹಿತಿಯ ಪ್ರಕಾರ, ದಂಪತಿಯ ನಡುವೆ ಜಗಳವಾಗಿದ್ದು, ನಂತರ ಪ್ರದೀಪ್ ಈ ಕೊಲೆ ಮಾಡಿದ್ದಾರೆ.ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪ್ರದೀಪ್ ಬಂಧನಕ್ಕೆ ಹುಡುಕಾಟ ಆರಂಭಿಸಿದ್ದಾರೆ.