Saturday, August 30, 2025

ರಾಹುಲ್‌ ಗಾಂಧಿ ರ‍್ಯಾಲಿಯಲ್ಲಿ ಪ್ರಧಾನಿ ಮೋದಿಯನ್ನು ನಿಂದಿಸಿದವ ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಿಹಾರದಲ್ಲಿ ರಾಹುಲ್‌ ಗಾಂಧಿಯವರ ‘ಮತದಾರ ಅಧಿಕಾರ ಯಾತ್ರೆ’ಯಲ್ಲಿ ಪ್ರಧಾನಿ ಮೋದಿ ಹಾಗೂ ಅವರ ತಾಯಿಯನ್ನು ನಿಂದಿಸಿದ ವ್ಯಕ್ತಿಯನ್ನು ದರ್ಭಂಗಾ ಪೊಲೀಸರು ಬಂಧಿಸಿದ್ದಾರೆ.

ಗುರುವಾರ ನಡೆದ ರ‍್ಯಾಲಿಯಲ್ಲಿ ವ್ಯಕ್ತಿಯೊಬ್ಬ ಕಾಂಗ್ರೆಸ್‌ ಪಕ್ಷದ ಶಾಲು ಧರಿಸಿ ಪ್ರಧಾನಿ ಮೋದಿ ವಿರುದ್ಧ ಹಿಂದಿಯಲ್ಲಿ ಅಶ್ಲೀಲ ಪದ ಬಳಸಿ ಮಾತಾಡಿದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದಾದ ಬಳಿಕ ಬಿಜೆಪಿ ಪ್ರಕರಣ ದಾಖಲಿಸಿ, ಕಾಂಗ್ರೆಸ್ ಕ್ಷಮೆಯಾಚಿಸುವಂತೆ ಒತ್ತಾಯಿಸಿತ್ತು. ಈ ಸಂಬಂಧ ರಾಹುಲ್ ಗಾಂಧಿಯವರ ವಿರುದ್ಧವೂ ‌ದೂರು ನೀಡಲಾಗಿದೆ. 

ಸಿಮ್ರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಎಫ್ಐಆರ್ ದಾಖಲಿಸಲಾಗಿತ್ತು. ಈ ಸಂಬಂಧ ಎ1 ಆರೋಪಿಯನ್ನು ಬಂಧಿಸಲಾಗಿದೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

.

ಇದನ್ನೂ ಓದಿ