ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ

ಹೊಸದಿಗಂತ ವರದಿ,ಮೈಸೂರು:

ಯುವಕನೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೆ.ಆರ್.ನಗರ ಸಮೀಪ ನಡೆದಿದೆ. ಗಂಧನಹಳ್ಳಿ ಗ್ರಾಮದ ನಿವಾಸಿ ವಿಜಯ್ ಎಂಬುವರ ಪುತ್ರ ಜಗದೀಶ್ (26) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈತನ ದೇಹವನ್ನು ರೈಲು ಹಳಿಯ ಮೇಲೆ ಕಂಡು ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ರೈಲ್ವೆ ಪೊಲೀಸರು ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ, ದೇಹವನ್ನು ಪೋಷಕರಿಗೆ ಒಪ್ಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!