Monday, October 13, 2025

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಪ್ರಕರಣ ಸಂಬಂಧ ಶಾಸಕರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ.

ಪ್ರಕರಣದ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಅರುಣ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಹೊರಡಿಸಿದೆ. ಅಲ್ಲದೆ ತನಿಖೆಗೆ ಸಹಕರಿಸುವಂತೆ ಶಾಸಕರಿಗೆ ಸೂಚನೆ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ಚುರುಕುಗೊಳಿಸಿದ್ದು ಪ್ರಮುಖ ಆರೋಪಿ ಜಗದೀಶ್ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಲಾಗಿದೆ.

error: Content is protected !!