ಲೋಕಸಭೆಯಲ್ಲಿನ ಭದ್ರತಾ ಲೋಪ ಗಂಭೀರ ವಿಚಾರ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆಯಲ್ಲಿ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ(Narendra Modi) ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ.

ಸಂಸತ್ತಿನಲ್ಲಿ ನಡೆದ ಘಟನೆ ಆತಂಕಕಾರಿಯಾಗಿದೆ . ಇದು ಗಂಭೀರವಾದ ವಿಚಾರ, ಈ ಬಗ್ಗೆ ಆಳವಾದ ತನಿಖೆ ನಡೆಯಬೇಕು,ಇದು ರಾಷ್ಟ್ರೀಯ ಭದ್ರತಾ ವಿಷಯವಾಗಿರುವುದರಿಂದ ರಾಜಕೀಯ ಪಕ್ಷಗಳು ಈ ವಿಷಯವನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು ಎಂದಿದ್ದಾರೆ.

ಈ ಘಟನೆಯ ಗಂಭೀರತೆಯನ್ನುಯಾರು ಡೆಗಣಿಸಬಾರದು, ಹಾಗಾಗಿ ಲೋಕಸಭಾ ಸ್ಪೀಕರ್ ಕೆಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಈ ಘಟನೆಯ ಹಿಂದಿನ ಉದ್ದೇಶವೇನು ಎಂದು ತಿಳಿಯಲು ವಿಷಯದ ಆಳಕ್ಕೆ ಹೋಗುವುದು ಮುಖ್ಯ, ಒಟ್ಟಾಗಿ ಪರಿಹಾರ ಸಿಗಬೇಕು ಎಂದು ಹೇಳಿದ್ದಾರೆ..

ಡಿಸೆಂಬರ್ 13 ರಂದು ಸಾಗರ್ ಹಾಗೂ ಮನೋರಂಜನ್ ಎನ್ನುವ ಇಬ್ಬರು ಸದನದೊಳಗೆ ನುಗ್ಗಿ ಹೊಗೆ ಕ್ಯಾನ್ ಎಸೆದಿದ್ದರು, ಲೋಕಸಭೆ ಪೂರ್ತಿ ಹೊಗೆ ತುಂಬಿಕೊಂಡಿದ್ದ ಕಾರಣ ಎಲ್ಲರೂ ಭಯಭೀತರಾಗಿದ್ದರು.

ಕೆಲ ಸಮಯದ ಬಳಿಕ ಅವರಿಬ್ಬರನ್ನು ಬಂಧಿಸಲಾಯಿತು, ಸಂಸತ್​ ಹೊರಗೆ ಘೋಷಣೆ ಕೂಗುತ್ತಿದ್ದ ಇನ್ನೂ ಇಬ್ಬರನ್ನು ಕೂಡ ವಶಕ್ಕೆ ಪಡೆಯಲಾಗಿದೆ. ಇಲ್ಲಿಯವರೆಗೆ ಈ ಪ್ರಕರಣದಲ್ಲಿ 6 ಮಂದಿಯನ್ನು ಬಂಧಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!