ವಾಯುವಿಹಾರಕ್ಕೆ ತೆರಳಿದ್ದ ಮಹಿಳೆಗೆ ಕಾರು ಡಿಕ್ಕಿ: ಸ್ಥಳದಲ್ಲೇ ಸಾವು

ಹೊಸದಿಗಂತ ವರದಿ ಅಂಕೋಲಾ:

ವಾಯುವಿಹಾರಕ್ಕೆ ತೆರಳಿದ್ದ ಮಹಿಳೆಗೆ ಕಾರು ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಮೃತ ಪಟ್ಟ ಘಟನೆ ತಾಲೂಕಿನ ಅವರ್ಸಾ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದೆ.

ಡೋಂಗ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೆಗ್ಗರಣಿ ನಿವಾಸಿ ದೀಪಾ ಅಶೋಕ ನಾಯ್ಕ (55) ಮೃತ ಮಹಿಳೆಯಾಗಿದ್ದು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ವಾಕಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ ಗೋವಾ ಕಡೆಯಿಂದ ಅತಿ ವೇಗದಲ್ಲಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ತಲೆಯ ಭಾಗದಲ್ಲಿ ಗಂಭೀರವಾಗಿ ಗಾಯಗೊಂಡು ಮಹಿಳೆ ಸ್ಥಳದಲ್ಲೇ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.

ಮಹಿಳೆಗೆ ಡಿಕ್ಕಿ ಹೊಡೆದ ಕಾರು ರಾಷ್ಟ್ರೀಯ ಹೆದ್ದಾರಿ ಪಕ್ಕದ ಪೂಟ್ ಪಾಥ್ ದಾಟಿ ಪಕ್ಕದ ಜಮೀನಿಗೆ ನುಗ್ಗಿದ್ದು ಅಪಘಾತದ ತೀವ್ರತೆಗೆ ಸಾಕ್ಷಿಯಾಗಿದೆ. ಈ ಕುರಿತು ಅಂಕೋಲಾ ಪೊಲೀಸ್ ಠಾಣೆ ಯಲ್ಲಿ ದೂರು ದಾಖಲಾಗಿದ್ದು ಅಂಕೋಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವರ್ಷಾಂತ್ಯದಲ್ಲಿ ಗೋವಾ ಮತ್ತು ಗೋಕರ್ಣ ಭಾಗಗಳಿಗೆ ತೆರಳುವ ಪ್ರವಾಸಿಗರು ಹೆಚ್ಚಾಗಿದ್ದು ಅಪಘಾತ ಪಡಿಸಿದ ವಾಹನ ಸಹ ಗೋವಾದಿಂದ ಗೋಕರ್ಣಕ್ಕೆ ಸಾಗುತಿತ್ತು ಎನ್ನಲಾಗಿದೆ.
ಪ್ರತಿವರ್ಷ ಡಿಸೆಂಬರ್ ಕೊನೆ ಮತ್ತು ಜನೆವರಿ ಆರಂಭದಲ್ಲಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತಗಳು ಸಂಭವಿಸುವುದು ಸಾಮಾನ್ಯವಾಗಿದ್ದು ಪ್ರವಾಸಿಗರ ಅತಿ ವೇಗ ಮತ್ತು ಅಜಾಗರೂಕತೆಯ ಚಾಲನೆಯಿಂದಾಗಿ ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!