ಸಂಸತ್ ನಲ್ಲಿ ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಮಸೂದೆ ಅಂಗೀಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ ಮತ್ತು ರಾಷ್ಟ್ರೀಯ ಡೋಪ್ ಟೆಸ್ಟಿಂಗ್ ಲ್ಯಾಬೋರೇಟರಿಯ ಕಾರ್ಯನಿರ್ವಹಣೆಗೆ ಶಾಸನಬದ್ಧ ಚೌಕಟ್ಟನ್ನು ಒದಗಿಸುವ ಉದ್ದೀಪನ ಮದ್ದು ತಡೆ ಮಸೂದೆಯನ್ನು ಸಂಸತ್ ಬುಧವಾರ ಅಂಗೀಕರಿಸಿದೆ.

ರಾಜ್ಯಸಭೆಯಲ್ಲಿ ಧ್ವನಿ ಮತದಿಂದ ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಮಸೂದೆ, 2022 ಅನ್ನು ಅಂಗೀಕರಿಸಲಾಯಿತು. ಲೋಕಸಭೆಯು ಕಳೆದ ವಾರ ಈ ಮಸೂದೆಯನ್ನು ಅಂಗೀಕರಿಸಿತ್ತು.

ಕ್ರೀಡೆ ಮತ್ತು ಯುವ ವ್ಯವಹಾರಗಳ ಸಚಿವ ಅನುರಾಗ್ ಠಾಕೂರ್ ಅವರು ಮಸೂದೆಯ ಕುರಿತು ಮಾತನಾಡಿದ್ದು, ಪ್ರಸ್ತುತ ಭಾರತವು ವರ್ಷಕ್ಕೆ ಸುಮಾರು 6,000 ಪರೀಕ್ಷೆಗಳನ್ನು ಮಾತ್ರ ನಡೆಸಬಹುದು. ಪರೀಕ್ಷಾ ಸಾಮರ್ಥ್ಯವನ್ನು ಗಮನಾರ್ಹವಾಗಿ ಹೆಚ್ಚಿಸಲು ಈ ಕಾನೂನು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ. ಯಾವುದೇ ದೊಡ್ಡ ಅಂತಾರಾಷ್ಟ್ರೀಯ ಚಾಂಪಿಯನ್‌ಶಿಪ್ ಮಾಡುವುದಾದರೆ ಅಗತ್ಯವಿರುವ ಪರೀಕ್ಷೆಗಳ ಸಂಖ್ಯೆ ತಿಂಗಳಿಗೆ 10,000 ಆಗಿರುತ್ತದೆ ಎಂದು ಅವರು ಹೇಳಿದರು.

ಈ ಮಸೂದೆ ಅಂಗೀಕಾರದೊಂದಿಗೆ ಕ್ರೀಡೆಗಳಲ್ಲಿ ಉದ್ದೀಪನ ಮದ್ದು ತಪಾಸಣೆಗೆ ಸಂಬಂಧಿಸಿದಂತೆ ತಮ್ಮದೇ ಆದ ಕಾನೂನುಗಳನ್ನು ಹೊಂದಿರುವ ಅಮೆರಿಕ , ಚೀನಾ, ಜಪಾನ್ ಮತ್ತು ಫ್ರಾನ್ಸ್‌ನಂತಹ ರಾಷ್ಟ್ರಗಳ ಗುಂಪಿಗೆ ಭಾರತ ಸೇರಲಿದೆ ಎಂದು ಠಾಕೂರ್ ಹೇಳಿದರು.

‘ರಾಷ್ಟ್ರೀಯ ಉದ್ದೀಪನ ಮದ್ದು ವಿರೋಧಿ ಏಜೆನ್ಸಿ (ನಾಡಾ), ರಾಷ್ಟ್ರೀಯ ಡೋಪ್ ಪರೀಕ್ಷಾ ಪ್ರಯೋಗಾಲಯ (ಎನ್‌ಡಿಟಿಎಲ್) ಮತ್ತು ಇತರ ಉದ್ದೀಪನಾ ಪರೀಕ್ಷಾ ಪ್ರಯೋಗಾಲಯಗಳ ಕಾರ್ಯಾಚರಣೆಗೆ ಶಾಸನಬದ್ಧ ಚೌಕಟ್ಟನ್ನು ಒದಗಿಸಲು ಮತ್ತು ಉದ್ದೀಪನಾ ಮದ್ದು ವಿರೋಧಿ ರಾಷ್ಟ್ರೀಯ ಮಂಡಳಿ ರಚಿಸುವ ಉದ್ದೇಶ ಹೊಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!