ಸಕಲೇಶಪುರದಲ್ಲಿ ಭಾರೀ ಭೂ ಕುಸಿತ, ರಸ್ತೆ ಕುಸಿದು ಹಳ್ಳಿಗಳಿಗೆ ಸಂಪರ್ಕ ಕಡಿತ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಕಲೇಶಪುರದಲ್ಲಿ ಭಾರೀ ಭೂ ಕುಸಿತ ಸಂಭವಿಸಿದ್ದು,
ರಸ್ತೆ ಕುಸಿತವಾಗಿದೆ. ಇದರಿಂದಾಗಿ ಹತ್ತಾರು ಹಳ್ಳಿಗಳಿಗೆ ಸಂಪರ್ಕ ಕಡಿತವಾಗಿದ್ದು, ಗ್ರಾಮಸ್ಥರು ಪರದಾಡುವಂತಾಗಿದೆ.

ರಾಜ್ಯದ ಹಲವೆಡೆ ಮಳೆರಾಯನ ಅಬ್ಬರ ಮುಂದುವರೆದಿದ್ದು, ಕೆಲವೆಡೆ ಗುಡ್ಡ, ಮಣ್ಣು ಕುಸಿಯುತ್ತಿದೆ. ಹಾಸನದ ಸಕಲೇಶಪುರದಲ್ಲೂ ಮಳೆಯಿಂದಾಗಿ ಬೃಹತ್ ಪ್ರಮಾಣದಲ್ಲಿ ಭೂ ಕುಸಿತ ಸಂಭವಿಸಿದೆ. ಪರಿಣಾಮ ರಸ್ತೆ ಸಮೇತ ಭೂಮಿ ಕೊಚ್ಚಿ ಹೋಗಿದೆ.

ಸಕಲೇಶಪುರ ತಾಲೂಕಿನ ಕುಂಬರಡಿ ಸಮೀಪ ಘಟನೆ ನಡೆದಿದೆ. ಕುಂಬರಡಿ ಹಾಗೂ ಹಾರ್ಲೇ ಎಸ್ಟೇಟ್ ಮಧ್ಯೆ ಭೂ ಕುಸಿತ ಸಂಭವಿಸಿದೆ. ರಸ್ತೆ 200 ಮೀಟರ್​ಗೂ ಹೆಚ್ಚು ದೂರ ಕೊಚ್ಚಿ ಹೋಗಿದೆ.

ರಸ್ತೆಯೇ ಕೊಚ್ಚಿಹೋಗಿರೋದ್ರಿಂದ ಹತ್ತಾರು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ರಸ್ತೆಯ ಪಕ್ಕದಲ್ಲಿ ಎತ್ತಿನಹೊಳೆ ಕಾಮಗಾರಿಗಾಗಿ ಕೆಲಸ ಮಾಡಲಾಗಿತ್ತು. ಇದರಿಂದಲೇ ಹೀಗೆ ಆಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!