ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹಾಜರಾಗಿ: ಸರ್ಕಾರಿ ಸಿಬ್ಬಂದಿಗಳಿಗೆ ಖಡಕ್‌ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹಾಜರಾಗದ ನೌಕರರ ವಿರುದ್ಧದ ರಾಜ್ಯ ಸರ್ಕಾರ ಕ್ರಮಕ್ಕೆ ಮುಂದಾಗಿದ್ದು, ಶಿಸ್ತು ಕ್ರಮ ಕೈಗೊಳ್ಳುವುದಾಗಿ ಖಡಕ್‌ ಆದೇಶ ಹೊರಡಿಸಿದೆ.
ಈ ಕುರಿತು ಆದೇಶ ಹೊರಡಿಸಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ‘ಸರ್ಕಾರಿ ನೌಕರರು ಕಚೇರಿಗೆ ನಿಗದಿತ ಅವಧಿಗೆ ಅಂದ್ರೆ ಬೆಳಗ್ಗೆ 10 ಗಂಟೆಗೆ ಕರ್ತವ್ಯಕ್ಕೆ ಕಡ್ಡಾಯವಾಗಿ ಹಾಜರಾಗಬೇಕು.
ಕಚೇರಿ ಅವಧಿ ಪೂರ್ಣವಾಗುವವರೆಗೆ ನಿಗದಿತ ಸ್ಥಾನದಲ್ಲಿರಬೇಕು. ಇನ್ನು ಕಚೇರಿ ಅವಧಿಯಲ್ಲಿ ಅನ್ಯ ಕೆಲಸದ ಮೇಲೆ ತೆರಳಿದ್ರೆ, ಅದಕ್ಕೆ ಕಾರಣವೇನು ಅನ್ನೋದನ್ನ ನಮೂದಿಸಿ ಅಧಿಕಾರಿಗಳ ಪೂರ್ವಾನುಮತಿ ಪಡೆದುಕೊಳ್ಳಬೇಕು’ ಎಂದಿದ್ದಾರೆ.
ಇನ್ನು ನೌಕಕರು ಕೆಲಸಕ್ಕೆ ತಡವಾಗಿ ಬಂದರೇ, ಕಚೇರಿ ಅವಧಿಯಲ್ಲಿ ಸ್ವಸ್ಥಾನದಲ್ಲಿ ಇಲ್ಲದಿದ್ದರೆ, ಮೇಲಧಿಕಾರಿಗಳ ಅನುಮತಿ ಪಡೆಯದಿದ್ದರೆ ನೌಕರರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್‌ ಎಚ್ಚರಿಕೆ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!