ಸರ್ಕಾರಿ ಶಾಲೆಯ ಬಿಸಿ ಊಟದಲ್ಲಿ ಹಾವು ಪತ್ತೆ: ವಿದ್ಯಾರ್ಥಿಗಳು ಅಸ್ವಸ್ಥ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬಿಹಾರದಲ್ಲಿ ಶನಿವಾರ ಮಧ್ಯಾಹ್ನದ ಬಿಸಿ ಊಟದಲ್ಲಿ ಹಾವು ಕಂಡುಬಂದಿದ್ದು , ಊಟ ಸೇವಿಸಿದ ಹಲವು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅರಾರಿಯಾ ಜಿಲ್ಲೆಯ ಫೋರ್ಬೆಸ್‌ಗಂಜ್‌ನಲ್ಲಿರುವ ಸರ್ಕಾರಿ ಶಾಲೆಯಲ್ಲಿ ನಡೆದಿದೆ.

ಶಾಲೆಯ ನೂರಾರು ಮಕ್ಕಳು ಆಹಾರವನ್ನು ಸೇವಿಸಿದ ನಂತರ ಅಸ್ವಸ್ಥರಾಗಿದ್ದು ಚಿಕಿತ್ಸೆಗಾಗಿ ಫೋರ್ಬ್ಸ್‌ಗಂಜ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಧ್ಯಾಹ್ನದ ಊಟದ ಸಮಯದಲ್ಲಿ ಎನ್‌ಜಿಒ ಸಿದ್ಧಪಡಿಸಿದ ಖಿಚಡಿಯನ್ನು ವಿದ್ಯಾರ್ಥಿಗಳಿಗೆ ಬಡಿಸಲಾಗಿತ್ತು. ಈ ವೇಳೆ ವಿದ್ಯಾರ್ಥಿಗೆ ಬಡಿಸಿದ್ದ ಪ್ಲೇಟ್‌ವೊಂದರಲ್ಲಿ ಹಾವು ಕಂಡುಬಂದಿದ್ದು, ಈ ಸುದ್ದಿ ಶಾಲೆಯಲ್ಲಿ ಹರಡಿದ ತಕ್ಷಣ ಶಾಲೆಯಲ್ಲಿ ಊಟದ ವಿತರಣೆಯನ್ನು ನಿಲ್ಲಿಸಲಾಯಿತು. ಆದರೆ ಅದಾಗಲೇ ಆಹಾರ ಸೇವಿಸಿದ್ದ ವಿದ್ಯಾರ್ಥಿಗಳಿಗೆ ವಾಂತಿಭೇದಿ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಫೋರ್ಬ್ಸ್‌ಗಂಜ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!