ಸಿಎಂ ಕುರ್ಚಿನ ಮೇಲೆ ಕಣ್ಣು: ದೆಹಲಿಯಲ್ಲಿ ರಹಸ್ಯ ಸಭೆ ನಡೆಸಿದ ಸಿದ್ದರಾಮಯ್ಯ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಆಯ್ಕೆಗಾಗಿ ಕಾಂಗ್ರೆಸ್ ನಲ್ಲಿ ರಾಜಕೀಯ ಗರಿಗೆದರಿದ್ದು, ದೆಹಲಿಯಲ್ಲಿ ಕೈ ನಾಯಕರ ಮ್ಯಾರಥಾನ್ ಮೀಟಿಂಗ್ ನಡೆದಿದೆ.

ಇತ್ತ ಸಿಎಂ ಸ್ಥಾನಕ್ಕಾಗಿ ಡಿ.ಕೆ. ಶಿವಕುಮಾರ್ ಹಾಗು ಸಿದ್ದರಾಮಯ್ಯ ನಡುವೆ ಭಾರೀ ಪೈಪೋಟಿ ನಡೆಯುತ್ತಿದ್ದು, ದೆಹಲಿಯಲ್ಲಿ ಸಿದ್ದು ಬೀಡುಬಿಟ್ಟಿದ್ದಾರೆ.

ಹೈಕಮಾಂಡ್ ಭೇಟಿಗಾಗಿ ಆಪ್ತ ಶಾಸಕರೊಂದಿಗೆ ದೆಹಲಿಗೆ ತೆರಳಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅಲ್ಲಿಯೇ ತಮ್ಮ ಆಪ್ತರ ಜೊತೆ ರಹಸ್ಯ ಸಭೆ ನಡೆಸಿದ್ದಾರೆ.

ಹೈಕಮಾಂಡ್ ಭೇಟಿಗೂ ಮುನ್ನ ಸಿದ್ದರಾಮಯ್ಯ ತಮ್ಮ ಬೆಂಬಲಿಗ ಶಾಸಕರಾದ ಎಂ.ಬಿ. ಪಾಟೀಲ್, ಜಮೀರ್ ಅಹ್ಮದ್, ಬೈರತಿ ಸುರೇಶ್, ಯತೀಂದ್ರ ಸಿದ್ದರಾಮಯ್ಯ, ಕೆ.ಜೆ. ಜಾರ್ಜ್ ಜೊತೆ ರಹಸ್ಯ ಸಭೆಯನ್ನು ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!