Wednesday, December 24, 2025

ಸ್ಥಳೀಯ ಸಮರದಲ್ಲಿ ‘ಕಮಲ’ ಕಲಿಗಳ ದಿಗ್ವಿಜಯ: ಕಾಂಗ್ರೆಸ್ ಕೋಟೆಗೆ ಲಗ್ಗೆ ಇಟ್ಟ ಬಿಜೆಪಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ವಿಪಕ್ಷ ಬಿಜೆಪಿ ಭರ್ಜರಿ ಟಕ್ಕರ್ ನೀಡಿದೆ. ಕರಾವಳಿಯಿಂದ ಬಯಲುಸೀಮೆಯವರೆಗೆ ಹರಡಿರುವ ಈ ಚುನಾವಣಾ ಕಣದಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಮೇಲುಗೈ ಸಾಧಿಸಿದೆ.

ದಕ್ಷಿಣ ಕನ್ನಡದ ಬಜಪೆ ಮತ್ತು ಕಿನ್ನಿಗೋಳಿ, ಉತ್ತರ ಕನ್ನಡದ ಮಂಕಿ ಹಾಗೂ ಬೆಂಗಳೂರು ಗ್ರಾಮಾಂತರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗಳಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದೆ.

ಕೇವಲ ಪಟ್ಟಣ ಪಂಚಾಯಿತಿಗಳಲ್ಲದೆ, ಉಪಚುನಾವಣೆಯಲ್ಲೂ ಬಿಜೆಪಿ ಜಯಭೇರಿ ಬಾರಿಸಿದೆ. ದೊಡ್ಡಬಳ್ಳಾಪುರ ನಗರಸಭೆಯ ಒಂದು ಸ್ಥಾನ ಹಾಗೂ ರಾಯಚೂರು ಜಿಲ್ಲೆಯ ತುರ್ವಿಹಾಳ ಪಟ್ಟಣ ಪಂಚಾಯತ್‌ನ 4ನೇ ವಾರ್ಡ್‌ಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ಪಕ್ಷದ ಬಲ ಪ್ರದರ್ಶಿಸಿದ್ದಾರೆ.

ಯಾರಿಗೆ ಎಷ್ಟು ಸ್ಥಾನ?

error: Content is protected !!