ಹಾವಿನ ಮರಿಗಾಗಿ ಕಾಸರಗೋಡಿನಲ್ಲಿ 54 ದಿನ ಹೆದ್ದಾರಿ ಕಾಮಗಾರಿ ಸ್ಥಗಿತ!!

ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾವಿನ ಮೊಟ್ಟೆಯಿಂದ ಮರಿಗಳು ಹೊರಬರಲು ಬರೋಬ್ಬರಿ 54 ದಿನಗಳ ಕಾಲ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನೇ ಸ್ಥಗಿತಗೊಳಿಸಿದ ಅಪರೂಪದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ಇಲ್ಲಿ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು, ಈ ಸಂದರ್ಭ ಹಾವೊಂದು ಮೊಟ್ಟೆಗೆ ಕಾವು ಕೊಡುತ್ತಿರುವುದು ಕಂಡುಬಂದಿತ್ತು. ಇದನ್ನು ತೆರವುಗೊಳಿಸುವ ಬದಲಿಗೆ ಕಾಳಜಿವಹಿಸಿದ ರಸ್ತೆ ಕಾಮಗಾರಿ ಹೊಣೆ ಹೊತ್ತಿರುವ ಉರಾಳುಂಗಲ್ ಸೊಸೈಟಿ ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳನ್ನು ಭೇಟಿಯಾಗಿ ಸಮಾಲೋಚನೆ ನಡೆಸಿತು. ವನ್ಯಜಿವಿ ಇಲಾಖೆ ಸಂಶೋಧನಾ ಮುಖ್ಯಸ್ಥ ಮವೀಶ್ ಕುಮಾರ್, ಈ ಸಂದರ್ಭ ಹಾವಿನ ಸ್ಥಳಾಂತರ ಸರಿಯಲ್ಲ ಎಂದು ಸಲಹೆ ನೀಡಿದರು. ಬಳಿಕ ಮೊಟ್ಟೆಯಿಂದ ಮರಿ ಹೊರಬಹುವ ತನಕ ಅಂದರೆ 54 ದಿನಗಳ ಕಾಲ ಕಾಮಗಾರಿ ಸ್ಥಗಿತಗೊಳಿಸಲು ಗುತ್ತಿಗೆದಾರ ಸಂಸ್ಥೆ ನಿರ್ಧರಿಸಿತು.
24 ಮೊಟ್ಟೆಗಳಿಂದ ಸೋಮವಾರ ಮರಿಗಳು ಹೊರಬಂದಿದ್ದು, 15 ಮರಿಗಳನ್ನು ಕಾಡಿಗೆ, ಉಳಿದ 9 ಮರಿಗಳನ್ನು ಶೀಘ್ರದಲ್ಲೇ ಅರಣ್ಯಕ್ಕೆ ಬಿಡಲಾಗುವುದು ಎಂದು ಉರಗ ತಜ್ಞ ಅಮೀನ್. ಇದೀಗ ಹೆದ್ದಾರಿ ಕಾಮಗಾರಿ ಮತ್ತೆ ಆರಂಭವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!