ಹಾಸನ – ಬೇಲೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಐವರು ವಿದ್ಯಾರ್ಥಿಗಳ ದಾರುಣ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸನ ಜಿಲ್ಲೆಯ ಬೇಲೂರು ಸಮೀಪ ಮಂಗಳವಾರ ಕೆಎಸ್ಸಾರ್ಟಿಸಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಬೇಲೂರು ಪಟ್ಟಣದ ನಿವಾಸಿಗಳಾದ ಅಕ್ಮಲ್ (18), ಜಿಲಾನಿ (19), ತೋಹಿದ್ (18), ಕೈಫ್ (18) ಎಂಬವರು ಸ್ಥಳದಲ್ಲೇ ಮೃತಪಟ್ಟರೆ, ಗಂಭೀರ ಗಾಯಗೊಂಡಿದ್ದ ರಿಹಾನ್ (19) ಆಸ್ಪತ್ರೆಗೆ ಕರೆದೊಯ್ಯುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಪ್ರಾಥಮಿಕ ತನಿಖೆಗಳ ಆಧಾರದಲ್ಲಿ ಇವರೆಲ್ಲರೂ ಬೇಲೂರಿನ ಖಾಸಗಿ ಕಾಲೇಜಿನ ಪಿಯು ಕಾಲೇಜು ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.
ಈ ದುರ್ದೈವಿಗಳು ಮಂಗಳವಾರ ಕಾಲೇಜು ಮುಗಿಸಿ ಕಾರಿನಲ್ಲಿ ಹಾಸನದತ್ತ ಹೊರಟಿದ್ದರು. ಬೇಲೂರು ತಾಲ್ಲೂಕಿನ ಸಂಕೇನಹಳ್ಳಿ ತಿರುವಿನಲ್ಲಿ ಚಿಕ್ಕಮಗಳೂರಿನತ್ತ ಹೊರಟಿದ್ದ ಸಾರಿಗೆ ಬಸ್ಸಿಗೆ ಕಾರು ಡಿಕ್ಕಿ ಹೊಡೆದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!