ಹೊಸದಿಗಂತ ಡಿಜಿಟಲ್ ಡೆಸ್ಕ್:
ಅನಾರೋಗ್ಯದಿಂದ ಬಳಲುತ್ತಿರೋ ಹಿರಿಯ ನಟಿ ಲೀಲಾವತಿಯವರ ಮನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ . ಅವರ ಆರೋಗ್ಯ ಕುಶಲೋಪರಿಯನ್ನ ವಿಚಾರಿಸಿದರು.
ಇತ್ತಿಚೇಗೆ ಅವರ ಆರೋಗ್ಯದಲ್ಲಿ ಏರುಪೇರಾಗಿ, ಆಹಾರ ಸೇವನೆ ನಿಲ್ಲಿಸಿದ್ದಾರೆ. ಪೈಪ್ ಮೂಲಕ ಅವರಿಗೆ ಆಹಾರವನ್ನ ನೀಡಲಾಗುತ್ತಿದೆ. ಅವರ ಆರೋಗ್ಯವನ್ನ ವಿಚಾರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನೆಗೆ ಭೇಟಿ ನೀಡಿದರು. ಮುಖ್ಯಮಂತ್ರಿಯವರನ್ನ ಬರಮಾಡಿಕೊಂಡ ವಿನೋದ್ ರಾಜ್ ತಾಯಿ ಆರೋಗ್ಯ ಸ್ಥಿತಿಯನ್ನು ವಿವರಿಸಿದರು.
ನಂತರ ಮಾಧ್ಯಮದೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ದೇವಸ್ಥಾನದ ಕಾರ್ಯಕ್ರಮದಲ್ಲಿ ಭಾಗಿಯಾಗಲು ನೆಲಮಂಗಲಕ್ಕೆ ಬಂದಿದ್ದೆ. ಈ ವೇಳೆ ಲೀಲಾವತಿ ಅವರ ಆರೋಗ್ಯ ವಿಚಾರಿಸಲು ಬಂದೆ. ಲೀಲಾವತಿಯವರು ನೈಜ ಕಲಾವಿದೆ. ಈ ಜಮೀನಿನ ಸಮಸ್ಯೆ ಇದ್ದಾಗ ನನ್ನ ಭೇಟಿ ಮಾಡಿದ್ರು. ಅವರನ್ನ ಆಸ್ಪತ್ರೆಗೆ ಸೇರಿಸಿದ್ರೆ ಎಲ್ಲಾ ಖರ್ಚುಗಳನ್ನು ನೋಡಿಕೊಳ್ಳುತ್ತೇವೆ. ಸರ್ಕಾರದಿಂದ ಯಾವ್ದಾದ್ರು ಸಹಾಯ ಬೇಕಿದ್ರೆ ನಾವು ಕೊಡುತ್ತೇವೆ ಎಂದರು.