ರಾಮಾಯಣ ನಾಟಕ ಪ್ರದರ್ಶಿಸಿದ ವಿದ್ಯಾರ್ಥಿಗಳಿಗೆ 1.02 ಲಕ್ಷ ರೂ. ದಂಡ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಮಾಯಣ ನಾಟಕ ಪ್ರದರ್ಶಿಸಿದ ವಿದ್ಯಾರ್ಥಿಗಳಿಗೆ ಬಾಂಬೆ ಐಐಟಿ 1.02 ಲಕ್ಷ ರೂ. ದಂಡ ವಿಧಿಸಿದೆ. ಎಂಟು ವಿದ್ಯಾರ್ಥಿಗಳು ನಾಟಕ ಪ್ರದರ್ಶನ ಮಾಡಿದ್ದು, ಇದರಲ್ಲಿನ ಕೆಲ ಅಂಶಗಳು  ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದೆ ಎಂದು ಆರೋಪಿಸಲಾಗಿದೆ.

ಮಾರ್ಚ್ 31 ರಂದು ಇನ್ಸ್ಟಿಟ್ಯೂಟ್‌ನ ಪರ್ಫಾರ್ಮಿಂಗ್ ಆರ್ಟ್ಸ್ ಫೆಸ್ಟಿವಲ್‌ನಲ್ಲಿ ‘ರಾಹೋವನ’ ಎಂಬ ನಾಟಕವನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದ್ದರು. ಎಲ್ಲಾ ಎಂಟು ವಿದ್ಯಾರ್ಥಿಗಳ ಮೇಲೆ ಬಾಂಬೆ ಐಐಟಿ ದಂಡ ಹಾಕಿದೆ.

ಮೇ 8 ರಂದು ನಡೆದ ಶಿಸ್ತು ಕ್ರಮ ಸಮಿತಿ ಸಭೆಯಲ್ಲಿ ಐಐಟಿ ಈ ವಿಷಯವನ್ನು ಪ್ರಸ್ತಾಪಿಸಿ ಕ್ರಮಕೈಗೊಂಡಿದೆ. ಜೂನ್ 4 ರಂದು ತೆಗೆದುಕೊಳ್ಳಬೇಕಾದ ಕ್ರಮದ ಬಗ್ಗೆ ಎಲ್ಲಾ ವಿದ್ಯಾರ್ಥಿಗಳಿಗೆ ತಿಳಿಸಿದೆ. ಸಂಸ್ಥೆಯು ನಾಲ್ಕು ವಿದ್ಯಾರ್ಥಿಗಳಿಗೆ 1.20 ಲಕ್ಷ ರೂ. ದಂಡ ವಿಧಿಸಿದೆ. ಪದವಿಪೂರ್ವ ವಿದ್ಯಾರ್ಥಿಗಳಾದ ಇತರ ನಾಲ್ವರು ವಿದ್ಯಾರ್ಥಿಗಳಿಗೆ 40,000 ರೂ. ದಂಡವನ್ನು ಪಾವತಿಸುವಂತೆ ಹೇಳಲಾಗಿದೆ. ಅಲ್ಲದೇ ಹಾಸ್ಟೆಲ್ ವಸತಿಗಳನ್ನು ಖಾಲಿ ಮಾಡುವಂತೆ ಅವರಿಗೆ ಆದೇಶಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!