ಒಂದೇ ದಿನದಲ್ಲಿ 1.06 ಕೋಟಿ ಲೀಟರ್ ಹಾಲು ಸಂಗ್ರಹ, ಇದು ಕೆಎಮ್‌ಎಫ್‌ ಕಮಾಲ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕರ್ನಾಟಕ ಹಾಲು ಒಕ್ಕೂಟ ಒಂದೇ ದಿನ ಸಾರ್ವಕಾಲಿಕ ಗರಿಷ್ಠ 1.06 ಕೋಟಿ ಲೀಟರ್ ಹಾಲು  ಸಂಗ್ರಹಿಸುವ ಮೂಲಕ ರಾಜ್ಯದ ಡೈರಿ ವಲಯದಲ್ಲಿ ಹೊಸ ದಾಖಲೆ ಸೃಷ್ಟಿಸಿದೆ. ಮೇ 22 ರ ನಂತರ ಈ ದಾಖಲೆ ಸಾಧ್ಯವಾಗಿದೆ.

ಅನುಕೂಲಕರವಾದ ಮುಂಗಾರು ಮಳೆ ಮತ್ತು ಹಸಿರು ಮೇವಿನ ಲಭ್ಯತೆಯ ಕಾರಣ ಈ ದಾಖಲೆ ಮಾಡುವುದು ಕೆಎಂಎಫ್​ಗೆ ಸಾಧ್ಯವಾಗಿದೆ ಎನ್ನಲಾಗಿದೆ. ಕೆಎಂಎಫ್ ಪ್ರಕಾರ, ಇದು ಕಳೆದ ವರ್ಷ ದಿನವೊಂದರಲ್ಲಿ ಸಂಗ್ರಹಿಸಿದ ಗರಿಷ್ಠ ಹಾಲಿಗಿಂತಲೂ ಹೆಚ್ಚು.

ಕಳೆದ ವರ್ಷ ಜೂನ್ 28 ರಂದು 1 ಕೋಟಿ ಲೀಟರ್ ಹಾಲು ಸಂಗ್ರಹಿಸಲಾಗಿತ್ತು. ಆನಂತರ ದೈನಂದಿನ ಸರಾಸರಿ ಸಂಗ್ರಹ ಪ್ರಮಾಣದಲ್ಲಿ ಗಮನಾರ್ಹ ಏರಿಕೆ ಕಂಡಿತ್ತು. ಇದರೊಂದಿಗೆ, ಹಾಲು ಉತ್ಪಾದಿಸುವ ಪ್ರಮುಖ ರಾಜ್ಯವಾಗಿ ಕರ್ನಾಟಕ ತನ್ನ ಛಾಪು ಮುಂದುವರಿಸಿದೆ.

ಕರ್ನಾಟಕದ ಹಲವಾರು ಪ್ರದೇಶಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿರುವುದು ಹಾಲಿನ ಉತ್ಪಾದನೆ ಹೆಚ್ಚಳಕ್ಕೆ ಪ್ರಮುಖ ಕಾರಣ ಎಂದು ಕೆಎಂಎಫ್ ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ಪ್ರಮಾಣದಲ್ಲಿ ಮೇವಿನ ಲಭ್ಯತೆ, ಜಾನುವಾರುಗಳಲ್ಲಿ ಪೌಷ್ಟಿಕತೆ, ಆರೋಗ್ಯ ಸುಧಾರಣೆ ಹಾಲಿನ ಉತ್ಪಾದನೆ ಹೆಚ್ಚಳಕ್ಕೆ ಕೊಡುಗೆ ನೀಡಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!