ಹೊಸದಿಗಂತ ಡಿಜಿಟಲ್ ಡೆಸ್ಕ್:
ಮ್ಯಾಟ್ರಿಮೊನಿಯಲ್ಲಿ ಪರಿಚಯವಾದ ಟೆಕ್ಕಿಗೆ ಯುವತಿಯೊಬ್ಬಳು ಬರೋಬ್ಬರಿ 1.14 ಕೋಟಿ ರೂ. ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.
ಬೆಂಗಳೂರಿನ ಯುಕೆ ಮೂಲದ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿರುವ ಟೆಕ್ಕಿ ಸಾಫ್ಟ್ ವೇರ್ ತರಬೇತಿಗಾಗಿ ಬೆಂಗಳೂರಿಗೆ ಬಂದಿದ್ದರು. ಈ ವೇಳೆ ಮದುವೆಯಾಗುವ ಉದ್ದೇಶದಿಂದ ಮ್ಯಾಟ್ರಿಮೊನಿಯಲ್ಲಿ ನೋಂದಣಿ ಮಾಡಿದ್ದರು. ಮ್ಯಾಟ್ರಿಮೊನಿಯಲ್ಲಿ ಪರಿಚಯವಾದ ಸಾನ್ವಿ ಅರೋರಾ, ಟೆಕ್ಕಿಗೆ ವಿಡಿಯೋ ಕಾಲ್ ಮಾಡಿದ್ದಾಳೆ. ಬೆತ್ತಲೆ ವಿಡಿಯೋದೊಂದಿಗೆ ಟೆಕ್ಕಿಗೆ ಗೊತ್ತಾಗದಂತೆಯೇ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದು, ನಂತರ ಬ್ಲ್ಯಾಕ್ ಮೇಲ್ ಮಾಡಲು ಆರಂಭಿಸಿದ್ದಳೆ .
ಬಳಿಕ ವಿಡಿಯೋ, ಫೋಟೊಗಳನ್ನು ಪೋಷಕರಿಗೆ ಕಳುಹಿಸುವುದಾಗಿ ಹೇಳಿ ಬೆದರಿಸಿ ತನ್ನ ಖಾತೆಗೆ ಹಂತ ಹಂತವಾಗಿ ಬರೋಬ್ಬರಿ 1 ಕೋಟಿ 14 ಲಕ್ಷ 18 ಸಾವಿರದ 121 ರೂಪಾಯಿ ವರ್ಗಾಯಿಸಿಕೊಂಡಿದ್ದಾಳೆ .
ಕೊನೆಗೆ ಯುವತಿಯ ಬ್ಲ್ಯಾಕ್ ಮೇಲ್ ಗೆ ಬೇಸತ್ತ ಟೆಕ್ಕಿ ವೈಟ್ ಫೀಲ್ಡ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಯುವತಿಯ ಖಾತೆಯಿಂದ 84 ಲಕ್ಷ ರೂಪಾಯಿ ತಡೆಹಿಡಿದಿದ್ದಾರೆ. ಆನ್ ಲೈನ್ ನಲ್ಲಿ ಪರಿಚಯವಾದವರೊಂದಿಗೆ ಸಾರ್ವಜನಿಕರು ಎಚ್ಚರದಿಂದ ಇರಬೇಕು ಎಂದು ಪೊಲೀಸರು ತಿಳಿಸಿದ್ದಾರೆ.