ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದಲ್ಲಿ ಭಾರೀ ಮಳೆ ಮುಂದುವರಿದಿದ್ದು, ಉಜನಿ ಮತ್ತು ವೀರ್ ಜಲಾಶಯಗಳಿಂದ ಭೀಮಾ ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿದು ಬಂದಿದೆ.
ಮಹಾರಾಷ್ಟ್ರದಿಂದ ಒಟ್ಟು 1,20,000 ಕ್ಯೂಸೆಕ್ ನೀರು ಭೀಮಾ ನದಿಗೆ ಸೇರಿದ್ದರಿಂದ ವಿಜಯಪುರ ಜಿಲ್ಲೆಯಲ್ಲಿ ಭೀಮಾ ನದಿ ಉಕ್ಕಿ ಹರಿಯುತ್ತಿದೆ. ಚಡಚಣ ತಾಲೂಕಿನ ಭೀಮಾನದಿಗೆ ಅಡ್ಡಲಾಗಿ ಕಟ್ಟಿರುವ ಉಮರಾಣಿ- ಲವಗಿ ಅಣೆಕಟ್ಟು ಮುಳುಗಡೆಯಾಗಿದೆ.
ಈ ಭಾಗದ ಭೀಮಾ ನದಿಯ ದಡದ ಜನರು ಭಾರೀ ಪ್ರಮಾಣದಲ್ಲಿ ನೀರು ಹರಿಯುತ್ತಿರುವುದರಿಂದ ಕಂಗಾಲಾಗಿದ್ದಾರೆ. ಚಡಚಣ, ಇಂಡಿ, ಆಲಮೇಲ, ಸಿಂದಗಿ ತಾಲೂಕಿನಲ್ಲಿ ಪ್ರವಾಹ ಭೀತಿ ಎದುರಾಗಿದೆ.