ಹೊಸದಿಗಂತ ಡಿಜಿಟಲ್ ಡೆಸ್ಕ್:
ಇನ್ನೂ ಹತ್ತು-ಹದಿನೈದು ದಿನಗಳಲ್ಲಿ ಕರ್ನಾಟಕ ರಾಜ್ಯಕ್ಕೆ ಅಗತ್ಯವಿರುವ 1.35 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಗೊಬ್ಬರವನ್ನು ಪೂರೈಸುವುದಾಗಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಜೆ.ಪಿ.ನಡ್ಡಾ ಭರವಸೆ ನೀಡಿದ್ದಾರೆ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಬಿಜೆಪಿ ಸಂಸದರೊಂದಿಗೆ ಭೇಟಿ ಮಾಡಿ, ಸಮಾಲೋಚನೆ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ರೈತರಿಗೆ ಸಕಾಲಕ್ಕೆ ಯೂರಿಯಾ ಗೊಬ್ಬರ ಸಿಗುತ್ತಿಲ್ಲ. ಮುಂಗಾರು ಹಾಗೂ ಮುಂಗಾರು ಪೂರ್ವ ಮಳೆ ಬಂದಿರುವುದರಿಂದ ದೊಡ್ಡ ಪ್ರಮಾಣದಲ್ಲಿ ರೈತರು ಮೆಕ್ಕೆಜೋಳ ಬೆಳೆಯುತ್ತಿದ್ದಾರೆ ಎಂದರು.
ಕರ್ನಾಟಕದಲ್ಲಿ ರೈತರಿಗೆ ಸಕಾಲಕ್ಕೆ ಯುರಿಯಾ ಗೊಬ್ಬರ ಸಿಗುತ್ರಿಲ್ಲ. ಇದು ದಿಡೀರ್ ಉದ್ಭವಿಸಿದ ಸಮಸ್ಯೆ ಅಲ್ಲ. ಮುಂಗಾರು ಹಾಗೂ ಮುಂಗಾರು ಪೂರ್ವ ಮಳೆ ಈ ವರ್ಷ ಚನ್ನಾಗಿ ಬಂದಿರುವುದರಿಂದ ಬಹಳಷ್ಟು ದೊಡ್ಡ ಪ್ರಮಾಣದಲ್ಲಿ ರೈತರು ಮೆಕ್ಕೆಜೋಳ ಬೆಳೆಯುತ್ತಿದ್ದಾರೆ. ಮೆಕ್ಕೆ ಜೋಳ ಬಿತ್ತನೆ ಪ್ರದೇಶ ಈ ವರ್ಷ ಶೇ 1.5 ರಷ್ಟು ಹೆಚ್ಚಳವಾಗಿದೆ. ಅಷ್ಟು ಪ್ರಮಾಣದಲ್ಲಿ ಬಿತ್ತನೆಯಾಗಿರುವುದು ಕೃಷಿ ಇಲಾಖೆಗೆ ಗೊತ್ತಿದೆ. ಅದನ್ನು ಇಲಾಖೆ ಒಪ್ಪಿಕೊಂಡಿದೆ. ಸಾಮಾನ್ಯವಾಗಿ ಯುರಿಯಾ ಬಹಳ ಬೇಡಿಕೆ ಜುಲೈ ನಿಂದ ಪ್ರಾರಂಭವಾಗಿ ಆಗಸ್ಟ್ ವರೆಗೂ ಇರುತ್ತದೆ. ಆದರೆ, ಸಮಯಕ್ಕೆ ಸರಿಯಾಗಿ ಮಳೆ ಆಗಿರುವುದರಿಂದ ಜೂನ್ ಮೂರನೇ ವಾರದಿಂದಲೇ ಗೊಬ್ಬರದ ಬೇಡಿಕೆ ಪ್ರಾರಂಭವಾಗಿದೆ ಎಂದರು.