ಹೊಸದಿಗಂತ ಡಿಜಿಟಲ್ ಡೆಸ್ಕ್ :
ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ ಭಾರೀ ಪ್ರಮಾಣದ ನೀರು ಬಿಡುಗಡೆ ಹಿನ್ನೆಲೆ ಜಾಗೃತರಾಗಿರುವಂತೆ ನದಿ ಪಾತ್ರದ ಗ್ರಾಮಗಳ ಜನರಿಗೆ ರಾಯಚೂರು ಜಿಲ್ಲಾಡಳಿತ ಮುನ್ನೆಚ್ಚರಿಕೆ ನೀಡಿದೆ.
ಜನ ಜಾನುವಾರು ನದಿಪಾತ್ರಕ್ಕೆ ತೆರಳದಂತೆ ಸೂಚಿಸಿದೆ. ಪ್ರವಾಹ ಪರಿಸ್ಥಿತಿ ಉಂಟಾದರೆ ಎದುರಿಸಲು ನೋಡಲ್ ಅಧಿಕಾರಿಗಳನ್ನ ನೇಮಕ ಮಾಡಲಾಗಿದೆ. ಜಲಾಶಯದ 25 ಗೇಟ್‌ಗಳ ಮೂಲಕ 1,45,750 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದ್ದು, ಸದ್ಯ ಜಲಾಶಯಕ್ಕೆ 1,40,000 ಕ್ಯೂಸೆಕ್ ಒಳಹರಿವು ಇದೆ.
ಶೇಕಡಾ 85.90 ರಷ್ಟು ಜಲಾಶಯ ಭರ್ತಿಯಾಗಿದೆ. 33.313 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ 28.615 ಟಿಎಂಸಿ ನೀರು ಸಂಗ್ರಹವಾಗಿದ್ದು, ಒಳ ಹರಿವು ಹೆಚ್ಚಾದ್ರೆ ನದಿಗೆ ಇನ್ನೂ ಹೆಚ್ಚು ಪ್ರಮಾಣದ ನೀರು ಬಿಡುವ ಸಾಧ್ಯತೆಯಿದೆ.