10 ವರ್ಷಗಳಲ್ಲಿ 1.5 ಪಟ್ಟು ಹೆಚ್ಚು ಸರ್ಕಾರಿ ಉದ್ಯೋಗ ಸೃಷ್ಟಿ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿ ಸರ್ಕಾರದ ಆಡಳಿತದಲ್ಲಿ 10 ವರ್ಷಗಳಲ್ಲಿ ಸುಮಾರು 1.5 ಪಟ್ಟು ಹೆಚ್ಚು ಸರ್ಕಾರಿ ಉದ್ಯೋಗಗಳನ್ನು ಒದಗಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ಹೇಳಿದ್ದಾರೆ.

ರೋಜಗಾರ್ ಮೇಳದ(ಉದ್ಯೋಗ ಮೇಳ) ಹಿನ್ನೆಲೆಯಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಒಂದು ಲಕ್ಷಕ್ಕೂ ಅಧಿಕ ಯುವಕರಿಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಿ ಮಾತನಾಡಿದ ಅವರು, ನಮ್ಮ ಸರ್ಕಾರ ಉದ್ಯೋಗ ನೇಮಕಾತಿಯಲ್ಲಿ ಪಾರದರ್ಶಕತೆ ತಂದಿದೆ. ಕಾಲಮಿತೊಯಲ್ಲಿ ಉದ್ಯೋಗಕ್ಕೆ ನೇಮಕಾತಿ ಖಚಿತಪಡಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ ಎಂದು ಹೇಳಿದರು.

ಈ ಹಿಂದೆ ಸರ್ಕಾರಗಳು ನೇಮಕಾತಿ ನಡೆಸಲು ಬಹಳ ಸಮಯ ತೆಗೆದುಕೊಳ್ಳುತ್ತಿದ್ದವು, ಆದರೆ, ಬಿಜೆಪಿ ಸರ್ಕಾರವು ತನ್ನ ದಶಕದ ಆಡಳಿತದಲ್ಲಿ ಹಿಂದಿನ ಸರ್ಕಾರಕ್ಕಿಂತ 10 ವರ್ಷಗಳಲ್ಲಿ ಸುಮಾರು 1.5 ಪಟ್ಟು ಹೆಚ್ಚು ಸರ್ಕಾರಿ ಉದ್ಯೋಗಗಳನ್ನು ಒದಗಿಸಿದೆ ಎಂದರು.

ನಮ್ಮ ಸರ್ಕಾರ ನಿಗದಿತ ಸಮಯದ ಚೌಕಟ್ಟಿನೊಳಗೆ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ನಾವು ಪ್ರಯತ್ನಿಸುತ್ತೇವೆ. ಇದರಿಂದ ಪ್ರತಿಯೊಬ್ಬರೂ ತಮ್ಮ ಸಾಮರ್ಥ್ಯಗಳನ್ನು ಪ್ರದರ್ಶಿಸಲು ಸಮಾನ ಅವಕಾಶವನ್ನು ನೀಡುತ್ತಿದೆ ಎಂದು ತಿಳಿಸಿದರು.

ಇನ್ನು ರೋಜ್ಗಾರ್ ಮೇಳದ ಅಡಿಯಲ್ಲಿ ಆಯ್ಕೆಯಾದ ಸಿಬ್ಬಂದಿಗಳನ್ನು ಕಂದಾಯ, ಗೃಹ, ಉನ್ನತ ಶಿಕ್ಷಣ, ಅಣುಶಕ್ತಿ, ರಕ್ಷಣೆ, ಹಣಕಾಸು ಸೇವೆಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಬುಡಕಟ್ಟು ವ್ಯವಹಾರಗಳು, ರೈಲ್ವೆಯಂತಹ ವಿವಿಧ ಸಚಿವಾಲಯಗಳಲ್ಲಿ ಮರುಸೇರ್ಪಡೆಸಲಾಗುವುದು ಎಂದು ಹೇಳಿದ್ದಾರೆ.

ಪ್ರತಿಯೊಬ್ಬ ಯುವಕನು ಕಠಿಣ ಪರಿಶ್ರಮ ಮತ್ತು ಪ್ರತಿಭೆಯ ಆಧಾರದ ಮೇಲೆ ತನ್ನ ಸ್ಥಾನವನ್ನು ಗಳಿಸಬಹುದು. 2014ರಿಂದ ಯುವಜನರನ್ನು ಭಾರತ ಸರ್ಕಾರದೊಂದಿಗೆ ಸಂಪರ್ಕಿಸುವ ಮೂಲಕ ರಾಷ್ಟ್ರ ನಿರ್ಮಾಣದ ಪಯಣದಲ್ಲಿ ತೊಡಗಿಸಿಕೊಳ್ಳುವುದು ಬಿಜೆಪಿ ಸರ್ಕಾರದ ಪ್ರಯತ್ನವಾಗಿದೆ. ಇನ್ನು ‘ಕರ್ಮಯೋಗಿ ಭವನ’ದ ಮೂಲಕ ಹೊಸದಾಗಿ ನೇಮಕಗೊಂಡ ಸಿಬ್ಬಂದಿಗೆ iGOT ಕರ್ಮಯೋಗಿ ಪೋರ್ಟಲ್ನಲ್ಲಿ ಆನ್ಲೈನ್ ಮಾಡ್ಯೂಲ್ ‘ಕರ್ಮಯೋಗಿ ಪ್ರಾರಂಭ’ ಮೂಲಕ ತರಬೇತಿ ನೀಡಲಾಗುತ್ತಿದೆ. iGOT ಕರ್ಮಯೋಗಿ ಪೋರ್ಟಲ್ನಲ್ಲಿ 800 ಕ್ಕೂ ಹೆಚ್ಚು ಇ-ಲರ್ನಿಂಗ್ ಕೋರ್ಸ್ಗಳನ್ನು ಒದಗಿಸಲಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!