ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರ ಹಾಲಿನ ಖರೀದಿ ದರದಲ್ಲಿ 1.50 ರೂ. ಕಡಿತ ಮಾಡಿದೆ. ಈ ನಿರ್ಧಾರದ ಬಗ್ಗೆ ಕೇಂದ್ರದ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿನ ಕಾಂಗ್ರೆಸ್ ಸರಕಾರ ಅಧಿಕಾರದ ದರ್ಪದ ಅಮಲಿನಿಂದ ಮುಳುಗಿ ಅನ್ನದಾತನ ಮೇಲೆ ಬರೆಯ ಮೇಲೆ ಬರೆ ಎಳೆಯುತ್ತಿದೆ. ರೈತರ ಜೀವನಾಧಾರವಾಗಿರುವ ಹಾಲಿನ ಮೇಲೂ ಕಾಂಗ್ರೆಸ್ ಸರ್ಕಾರದ ಹುನ್ನಾರವಿದೆ. ಹಾಲಿನ ಖರೀದಿ ದರಕ್ಕೆ ಕತ್ತರಿ ಪ್ರಯೋಗವಾಗಿದೆ ಎಂದು ಕಿಡಿ ಕಾರಿದ್ದಾರೆ.