ಬೆಂಗಳೂರಿನ ಏರ್‌ಪೋರ್ಟ್‌ನಲ್ಲಿ 1.7 ಕೋಟಿ ರೂ. ಮೌಲ್ಯದ ಚಿನ್ನ ಸಾಗಣೆ ಯತ್ನ, ಮೂವರು ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕಳ್ಳ ಸಾಗಾಣಿಕೆಯಲ್ಲಿ ಚಿನ್ನಾಭರಣ ಸಾಗಿಸಲು ಯತ್ನಿಸಿದ ಮೂವರು ವಿದೇಶಿಗರನ್ನು ಬಂಧಿಸಿ 2.44 ಕೆಜಿ ಚಿನ್ನವನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಥಾಯ್ಲೆಂಡ್ ದೇಶದ ಬ್ಯಾಂಕಾಂಕ್ ನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ 3 ವಿದೇಶಿಗರಿಂದ ರೂ.1.71 ಕೋಟಿ ಮೌಲ್ಯದ 2.44 ಕೆಜಿ ಚಿನ್ನವನ್ನು ಜಪ್ತಿ ಮಾಡಿದ್ದಾರೆ.

ವಿದೇಶದಿಂದ ರಿಂಗ್ ಗಳಿಗೆ ಕಚ್ಚಾ ಬಂಗಾರವನ್ನು ಅಡಗಿಸಿಕೊಂಡು ಅಕ್ರಮವಾಗಿ ಸಾಗಿಸುತ್ತಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೆಐಎಗೆ ಬ್ಯಾಂಕಾಂಕ್ ನಿಂದ ಥಾಯ್ ಏರ್ ಲೈಸ್ ವಿಮಾನದಲ್ಲಿ ಆಗಮಿಸಿದ ಪ್ರಯಾಣಿಕರನ್ನು ಪರೀಕ್ಷಿಸಿದಾಗ ಸಿಕ್ಕಿಬಿದ್ದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!