Thursday, August 11, 2022

Latest Posts

1.90 ಕೋಟಿ ರೂ. ವೆಚ್ಚದ ರಸ್ತೆ ಮರುಡಾಂಬರೀಕರಣಕ್ಕೆ ಭೂಮಿ ಪೂಜೆ

ಬಳ್ಳಾರಿ: ಶಾಸಕರ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ಕಾಮಗಾರಿಯು ಉತ್ತಮ ಗುಣಮಟ್ಟದ ರಸ್ತೆಯಾಗಿ ಸಾರ್ವಜನಿಕರ ಓಡಾಟಕ್ಕೆ ಅನುಕೂಲವಾಗಲಿದೆ ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷರಾದ ನಾಗವೇಣಿ ಬಸವರಾಜ ಅವರು ಅಭಿಪ್ರಾಯಪಟ್ಟರು.
ಹೊಸಪೇಟೆ ನಗರದ ಹುಡಾ ಕಚೇರಿಯ ಬಳಿ ಗುರುವಾರ ರಾಜ್ಯ ಹೆದ್ದಾರಿ 49ರ ಹಂಪಿ ರಸ್ತೆಯಿಂದ ಹುಡಾ ಕಚೇರಿವರೆಗಿನ ಚತುಷ್ಪತ ಬೈಪಾಸ್ ರಸ್ತೆಯ ಮರುಡಾಂಬರೀಕರಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಲೋಕೋಪಯೋಗಿ ಇಲಾಖೆಯ 2019-20ನೇ ಸಾಲಿನ ಅಪೆಂಡಿಕ್ಸ್-ಇ ಯೋಜನೆಯ ಅಡಿಯಲ್ಲಿ ಮಂಜೂರಾದ 1.90ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮರುಡಾಂಬರೀಕರಣ ಕಾಮಗಾರಿಗೆ ಚಾಲನೆ ದೊರೆತಿದ್ದು; ಪ್ರವಾಸಿಗರಿಗೆ, ಸಾರ್ವಜನಿಕರ ಸಂಚಾರಕ್ಕೆ ಅನುವಾಗಲಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವರ ಅಭಿವೃದ್ಧಿ ಕಾರ್ಯಗಳಲ್ಲಿ ಈ ಕಾಮಗಾರಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಹುಡಾ ಅಧ್ಯಕ್ಷ ಐಯಾಳಿ ತಿಮ್ಮಪ್ಪ, ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಸಹಾಯಕ ಧರ್ಮೇಂದ್ರ ಸಿಂಗ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಕಿಶೋರ್ ಕುಮಾರ್, ಲೋಕೋಪಯೋಗಿ ಇಲಾಖೆಯ ಎಂಜನಿಯರ್ ಗಳಾದ ಅಶೋಕ, ಚಂದ್ರಕಾಂತ,ನಗರಸಭೆ ಎಂಜನೀಯರ್ ಮನ್ಸೂರ್, ಗುತ್ತಿಗೆದಾರ ಬಸವರಾಜ,ಸಂದೀಪ್ ಸಿಂಗ್ ಸೇರಿದಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss