ದೇಶದಲ್ಲಿ ಮತ್ತೆ ಹೆಚ್ಚುತ್ತಿದೆ ಕೋವಿಡ್: ನಿನ್ನೆ ಒಂದೇ ದಿನ 1.94 ಲಕ್ಷ ಜನರಿಗೆ ಕೊರೋನಾ ಸೋಂಕು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೇಶದಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ನಿನ್ನೆ ಒಂದೇ ದಿನ 1,94,720 ಹೊಸ ಕೊರೋನಾ ಪ್ರಕರಣ ಪತ್ತೆಯಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಆರೋಗ್ಯ ಇಲಾಖೆ, ಕಳದ 24 ಗಂಟೆಗಳಲ್ಲಿ 1,94,720 ಕೊರೋನಾ ಸೋಂಕಿತರು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,60,71,510ಕ್ಕೆ ಏರಿಕೆಯಾಗಿದೆ. ನಿನ್ನೆ ದೇಶದಲ್ಲಿ 442 ಮಂದಿ ಬಲಿಯಾಗಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 4,84,655ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಪೈಕಿ 3,46,30,536 ಮಂದಿ ಗುಣಮುಖರಾಗಿದ್ದಾರೆ.
ದೇಶದಲ್ಲಿ ಕೊರೋನಾ ಲಸಿಕೆಯ 2 ಡೋಸುಗಳ ನಂತರ ಈಗ 60 ವರ್ಷ ಮೇಲ್ಪಟ್ಟವರಿಗೆ ಹಾಗೂ ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್‌ ಡೋಸ್‌ ನೀಡಲಾಗುತ್ತಿದೆ.
ಈವರೆಗೆ ಒಟ್ಟು 1,53,80,08,200 ಡೋಸ್‌ ಲಸಿಕೆ ನೀಡಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!