ಹೊಸದಿಗಂತ ಡಿಜಿಟಲ್ ಡೆಸ್ಕ್:
ಶೇ.1ರಷ್ಟು ಕಮಿಷನ್ ಪಡೆದ ಆರೋಪದಡಿ ಬಂಧನಕ್ಕೊಳಗಾಗಿರುವ ಪಂಜಾಬ್ನ ಮಾಜಿ ಸಚಿವ ವಿಜಯ್ ಸಿಂಗ್ಲಾ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮೊಹಾಲಿ ನ್ಯಾಯಾಲಯ ಆದೇಶಿಸಿದೆ. ಮುಂದಿನ ವಿಚಾರಣೆಯನ್ನು ಜೂನ್ 10ಕ್ಕೆ ನಿಗದಿಪಡಿಸಲಾಗಿದೆ.
ಆರೋಗ್ಯ ಇಲಾಖೆಯ ಸಚಿವರಾಗಿದ್ದ ವಿಜಯ್ ಸಿಂಗ್ಲಾ ಅವರನ್ನು ಶೇ.1ರಷ್ಟು ಕಮಿಷನ್ ಪಡೆದ ಆರೋಪದ ಮೇಲೆ ಮೇ 24ರಂದು ಸಿಎಂ ಭಗವಂತ್ ಮಾನ್ ಸಚಿವ ಸಂಪುಟದಿಂದ ವಜಾ ಮಾಡಿದ್ದರು. ಅಂತೆಯೇ ಸಿಂಗ್ಲಾ ಅವರನ್ನು ಪೊಲೀಸರು ಬಂಧಿಸಿ ಮೂರು ದಿನಗಳ ಕಾಲ ತಮ್ಮ ಕಸ್ಟಡಿಗೆ ಪಡೆದಿದ್ದರು.
ಇಂದು ಅವರನ್ನು ಮೊಹಾಲಿ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದರು. ಆಗ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ.