ಹೊಸದಿಗಂತ ಡಿಜಿಟಲ್ ಡೆಸ್ಕ್:
ರೈಲಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಎಂಟು ಮಂದಿ ಶಂಕಿತರನ್ನು ಬೆಂಗಳೂರು ರೈಲ್ವೆ ಪೊಲೀಸರು ಬಂಧಿಸಿ ವಿಚಾರಣೆಗೆ ಹಾಜರುಪಡಿಸಿದ್ದಾರೆ.
ಆರೋಪಿಗಳ ಬಳಿ ಇದ್ದ, ಬರೊಬ್ಬರಿ 1 ಕೋಟಿ ರೂ. ಗಾಂಜಾ ಜಪ್ತಿ ಮಾಡಿದ್ದಾರೆ. ಬೆಂಗಳೂರು ಪೊಲೀಸರು ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ನಗರಕ್ಕೆ ಸಂಪರ್ಕ ಕಲ್ಪಿಸುವ ಹೆದ್ದಾರಿಗಳಲ್ಲಿನ ಚೆಕ್‌ಪೋಸ್ಟ್‌ಗಳಲ್ಲಿ ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ.
ದಂಧೆಕೋರರು ಹೊಸ ದಾರಿಗಳನ್ನು ಕಂಡುಕೊಂಡಿದ್ದಾರೆ. ಪೊಲೀಸ್ ನಾಯಿಗಳಿಗೂ ವಾಸನೆ ಬರದ ರೀತಿಯಲ್ಲಿ ಗಾಂಜಾವನ್ನು ರೈಲುಗಳಲ್ಲಿ ಸಾಗಿಸುತ್ತಿದ್ದಾರೆ. ಪ್ರಶಾಂತಿ ಮತ್ತು ಹಟಿಯಾ ಎಕ್ಸ್ಪ್ರೆಸ್ ರೈಲಿನಲ್ಲಿ ಆಂದ್ರಪ್ರದೇಶ, ತಮಿಳುನಾಡು, ಓಡಿಶಾಕ್ಕೆ ಗಾಂಜಾ ಸರಬರಾಜು ಮಾಡುತ್ತಿದ್ದರು.
ಬೆಂಗಳೂರು ರೈಲ್ವೇ ಪೊಲೀಸರು ಮನೆ ಪರಿಶೀಲಿಸಿದಾಗ ಶಂಕಿತ ಕೈಚೀಲದಲ್ಲಿ ಗಾಂಜಾ ಪತ್ತೆಯಾಗಿದೆ. ಪೊಲೀಸರು ಕೂಡಲೇ ಆರೋಪಿಯನ್ನು ಬಂಧಿಸಿ ಗಾಂಜಾವನ್ನು ಸೀಜ್ ಮಾಡಿದ್ದಾರೆ.