ಹೊಸ ದಿಗಂತ ವರದಿ, ಕಾರವಾರ:
ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಮತಿ ರೂಪಾಲಿ ಎಸ್.ನಾಯ್ಕ ಅವರ ಮನವಿಯ ಹಿನ್ನೆಲೆಯಲ್ಲಿ
ಕ್ಷೇತ್ರದಲ್ಲಿ ನಾಲ್ಕು ಸಮುದಾಯ ಭವನಗಳಿಗೆ ತಲಾ 1 ಕೋಟಿ ರೂ. ಅನುದಾನ ನೀಡಲು ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದ್ದಾರೆ.
ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿನ ಕೋಮಾರಪಂತ, ನಾಮಧಾರಿ, ಪಡ್ತಿ ಹಾಗೂ ಹರಿಕಂತ್ರ ಸಮಾಜಕ್ಕಾಗಿ ನೂತನ ಸಮುದಾಯ ಭವನ ನಿರ್ಮಾಣಕ್ಕೆ ತಲಾ 1 ಕೋಟಿ ರೂಪಾಯಿಗಳಂತೆ ಬಿಡುಗಡೆ ಮಾಡಲು ಸಮ್ಮತಿಸಿದ್ದಾರೆ.
ಕ್ಷೇತ್ರದಲ್ಲಿನ ಈ ಸಮಾಜದ ಚಟುವಟಿಕೆಗಳಿಗೆ ಸಮುದಾಯ ಭವನದಿಂದ ಅನುಕೂಲವಾಗಲಿದೆ. ಶಾಸಕರು ಸಮುದಾಯ ಭವನ ನಿರ್ಮಾಣದ ಅಗತ್ಯತೆ ಬಗ್ಗೆ ವಿವರವಾದ ಮಾಹಿತಿ ನೀಡಿ ಅನುದಾನ ನೀಡುವಂತೆ ವಿನಂತಿಸಿದ್ದರು.
ತಮ್ಮ ಕ್ಷೇತ್ರದಲ್ಲಿನ ಎಲ್ಲ ಸಮಾಜದ ಅಭಿವೃದ್ಧಿಗೆ ಶ್ರಮಿಸುವುದಾಗಿ ಶಾಸಕರು ತಿಳಿಸಿದ್ದಾರೆ.