Saturday, January 28, 2023

Latest Posts

ಉತ್ತರಪ್ರದೇಶ: ಆಂಬ್ಯುಲೆನ್ಸ್‌ ಡಿಕ್ಕಿಯಾಗಿ ಓರ್ವ ಸಾವು, 3 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್‌
ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ಶುಕ್ರವಾರ ವೇಗವಾಗಿ ಬಂದ ಆಂಬ್ಯುಲೆನ್ಸ್‌ಗೆ ಡಿಕ್ಕಿ ಹೊಡೆದು ಒಬ್ಬರು ಸಾವನ್ನಪ್ಪಿ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಎರಡು ದ್ವಿಚಕ್ರವಾಹನಗಳಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರಿಗೆ ಡಿಕ್ಕಿ ಹೊಡೆದ ನಂತರ ಆಂಬ್ಯುಲೆನ್ಸ್ ರಸ್ತೆ ವಿಭಜಕಕ್ಕೆ ಹತ್ತಿ ತೀವ್ರವಾಗಿ ಜಖಂಗೊಂಡಿದೆ ಎಂದು ಅವರು ಹೇಳಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಅಖಿಲೇಶ್ ನಾರಾಯಣ್ ಮಾತನಾಡಿ, ಬೈಕ್‌ ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಸಹೋದರರು ವೇಗವಾಗಿ ಬಂದ ಆಂಬ್ಯುಲೆನ್ಸ್‌ಗೆ ಡಿಕ್ಕಿಯಾಗಿದ್ದಾರೆ. ಸಹೋದರರಲ್ಲಿ ಒಬ್ಬರಾದ ಆಯುಷ್ ವರ್ಮಾ ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅದೇ ವೇಳೆ ಮತ್ತೊಂದು ದ್ವಿಚಕ್ರವಾಹನದಲ್ಲಿ ಪ್ರಯಾಣಿಸುತ್ತಿದ್ದ ದಂಪತಿಗೂ ಆಂಬ್ಯುಲೆನ್ಸ್‌ಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಅಪಘಾತದ ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ನಾರಾಯಣ್ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!