ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಓರ್ವ ಸಾವು ಮತ್ತು ಮೂವರು ಗಾಯಗೊಂಡಿರುವ ಘಟನೆ ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.
ಆಂಜನೇಯ ಪಟಾಕಿ ಕಾರ್ಖಾನೆಯ ಮಾಲೀಕ ಮಣಿ ಎಂಬುವವರು ಮುಂಬರುವ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಆಟಂ ಬಾಂಬ್‌ಗಳನ್ನು ತಯಾರಿಸಲು ರಾಸಾಯನಿಕಗಳನ್ನು ಮಿಶ್ರಣ ಮಾಡುತ್ತಿರುವ ವೇಳೆ ಸ್ಫೋಟ ಸಂಭವಿಸಿದ್ದು, ಅವರು ಸ್ಫೋಟದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.
ಗಾಯಾಳುಗಳ ಪೈಕಿ ಇಬ್ಬರು ಮಹಿಳೆಯರು ಸೇರಿದ್ದಾರೆ. ಅಲ್ಲದೆ ಪಟಾಕಿ ಕಾರ್ಖಾನೆ ಸೂಕ್ತ ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸುತ್ತಿತ್ತು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ನಾಗಪಟ್ಟಣಂ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದು, ಮಣಿ ಅವರು ಪರವಾನಗಿ ಇಲ್ಲದೇ ಕಾರ್ಖಾನೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ.