ವಸತಿ ಯೋಜನೆ ಫಲಾನುಭವಿಗಳಿಗೆ ತಲಾ 1 ಲಕ್ಷರೂ. ನೆರವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಲಕ್ಷ ಮನೆ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಯೋಜನೆಯ ಫಲಾನುಭವಿಗಳಿಗೆ ಆರ್ಥಿಕ ಹೊರೆ ತಗ್ಗಿಸುವ ನಿಟ್ಟಿನಲ್ಲಿ ಸಿದ್ದರಾಮಯ್ಯ ಮಹತ್ವದ ನಿರ್ಧಾರ ಕೈಗೊಂಡಿದ್ದು, ವಸತಿ ಯೋಜನೆ ಫಲಾನುಭವಿಗಳಿಗೆ ತಲಾ 1 ಲಕ್ಷರೂ. ನೆರವು ಘೋಫಷಣೆ ಮಾಡಿದ್ದಾರೆ.

ಫಲಾನುಭವಿಗಳ ವಂತಿಕೆಯ ಒಟ್ಟು ವೆಚ್ಚ ರೂ.121.53 ಕೋಟಿ ಬಿಡುಗಡೆ ಮಾಡಲು ಸಮ್ಮತಿಸಿದ್ದಾರೆ ಎಂದು ವಸತಿ ಸಚಿವ ಜಮೀರ್‌ ಅಹಮದ್‌ ಖಾನ್‌ ಮಾಹಿತಿ ನೀಡಿದ್ದಾರೆ. ಈ ಯೋಜನೆಗೆ 2017ರಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ರೂ.6 ಲಕ್ಷ ನಿಗದಿ ಮಾಡಲಾಗಿತ್ತು. ಕೇಂದ್ರ ಸರ್ಕಾರ ರೂ.1.50 ಲಕ್ಷ, ರಾಜ್ಯ ಸರ್ಕಾರ ಸಾಮಾನ್ಯ ವರ್ಗಕ್ಕೆ ರೂ.1.20 ಲಕ್ಷ, ಪರಿಶಿಷ್ಟ ವರ್ಗಕ್ಕೆ ರೂ.2 ಲಕ್ಷ ನಿಗದಿ ಮಾಡಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!